ನಟಿ ಶೃತಿಯಿಂದ KSRTC ಬಸ್ಸಿನಲ್ಲಿರೋ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲನೆ

ಬೆಂಗಳೂರು: ನಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಶೃತಿ ಮೆಜೆಸ್ಟಿಕ್‍ನ ಕೆಂಪೇಗೌಡ ಬಸ್ ನಿಲ್ದಾಣದ ಸ್ತ್ರೀ ಶೌಚಾಲಯವನ್ನು ವೀಕ್ಷಿಸಿದ್ರು.

ಕೆಎಸ್‌ಆರ್‌ಟಿಸಿ ನಿಗಮವು ಅನುಷ್ಠಾನಗೊಳಿಸಿರುವ ಸ್ತ್ರೀ ಶೌಚಾಲಯದ ಅನುಷ್ಠಾನ, ಬಳಕೆ ಹಾಗೂ ಮಹಿಳೆಯರಿಗೆ ಆಗುತ್ತಿರುವ ಅನುಕೂಲಗಳ ಬಗ್ಗೆ ಮಾಹಿತಿ ಪಡೆದರು. ಸ್ತ್ರೀ ಶೌಚಾಲಯಗಳ ಅವಶ್ಯಕತೆಯು ಬಹಳಷ್ಟು ಇದ್ದು ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಬೇಕೆಂದು ತಿಳಿಸಿದರು.

ಮೆಜೆಸ್ಟಿಕ್‍ನ ಕೆಎಸ್‌ಆರ್‌ಟಿಸಿಯ ಕೆಂಪೇಗೌಡ ಬಸ್ ನಿಲ್ದಾಣದ ಒಂದನೇ ಟರ್ಮಿನಲ್ ನ ಪ್ರವೇಶ ದ್ವಾರದ ಸಮೀಪ ಈ ವಿಶೇಷ ಶೌಚಾಲಯವಿದ್ದು, ಬಸ್ ನಿಲುಗಡೆ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಗುಜರಿ ಬಸ್ಸನ್ನು ಹೈಟೆಕ್ ಶೌಚಾಲಯವಾಗಿ ಪರಿವರ್ತಿಸಲಾಗಿದೆ. ಈ ಮುಖಾಂತರ ಕೆಎಸ್‌ಆರ್‌ಟಿಸಿ ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ಅತ್ಯಾಧುನಿಕ ಶೌಚಾಲಯ ನಿರ್ಮಾಣ ಮಾಡಿದ ದೇಶದ ಮೊದಲ ರಸ್ತೆ ಸಾರಿಗೆ ನಿಗಮವಾಗಿದೆ. ಹನ್ನೆರಡು ಮೀಟರ್ ಉದ್ದದ ಬಸ್ಸಿನಲ್ಲಿ ಇಂಡಿಯನ್ ಹಾಗೂ ವೆಸ್ಟರ್ನ್ ಶೌಚಾಲಯಗಳಿವೆ.

Comments

Leave a Reply

Your email address will not be published. Required fields are marked *