ನನ್ನಿಂದ ಯಾರಿಗೂ ತೊಂದರೆಯಾಗಬಾರದು – ಸೋಂಕಿತ ನಿವೃತ್ತ ಉಪ ತಹಶೀಲ್ದಾರ್ ಸೂಸೈಡ್

– ಶ್ರೀ ಮಾರಿಕಾಂಬಾ ದೇವಿಗೆ ಕ್ಷಮೆ ಕೋರಿ ಪತ್ರ
– ಶೂಟ್ ಮಾಡಿಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು: ಡೆತ್ ನೋಟ್ ಬರೆದಿಟ್ಟು ಕೊರೋನಾ ಸೋಂಕಿತ ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತರೀಕೆರೆ ತಾಲೂಕಿನ ಬೇಲೇನಹಳ್ಳಿ ತಾಂಡ್ಯದಲ್ಲಿ ನಡೆದಿದೆ.

ಸೋಮಾ ನಾಯಕ್(72) ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ತೋಟದಲ್ಲಿ ತಮ್ಮ ಕಾರಿನಲ್ಲಿ ತಾವೇ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ನಿವೃತ್ತಿಯ ಬಳಿಕ ಹಳ್ಳಿಯಲ್ಲೇ ತೋಟ ನೋಡಿಕೊಂಡಿದ್ದ ಸೋಮಾ ನಾಯಕ್ ಅವರಿಗೆ ಕೊರೊನಾ ಸೋಂಕು ಬಂದಿತ್ತು. ಇದರಿಂದ ಮನನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡೆತ್‍ನೋಟ್‍ನಲ್ಲಿ ಏನಿದೆ?
ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಹರಡುವಂತಾಯಿತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನು ನನ್ನಿಂದ ಸಹಿಸಿಕೊಳ್ಳಲು ಆಗುವುದಿಲ್ಲ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ.

ಪಲ್ಸ್ ರೇಟ್ ಕಡಿಮೆಯಾಗಿ, ಉಸಿರಾಟಕ್ಕೆ ತೊಂದರೆಯಾಗಿ ಸಾವು ಆಗಲು ಜೀವಕ್ಕೆ ಕಷ್ಟವಾದರೆ ಮಾತ್ರ ಆತ್ಮಹತ್ಯೆ. ಸುಖವಾಗಿ ಸತ್ತರೆ ಚಿಂತೆಯೇ ಇಲ್ಲ. ಅಮ್ಮಾ, ಮಾರಿಕಾಂಬಾ ದೇವಿ ನಿನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಅಷ್ಟರಲ್ಲಿಯೇ ನೀನು ನನ್ನನ್ನ ಕರೆದುಕೊಂಡು ಬಿಟ್ಟೆ.

 

ನನಗೆ ಕೊರೊನಾ ಪಾಸಿಟಿವ್ ಇದ್ದ ಕಾರಣ ಅಗ್ನಿಸ್ಪರ್ಶ ಮಾಡಲು ಅನುಕೂಲವಾಗುವಂತೆ ಜಾಗ ಆರಿಸಿಕೊಂಡಿದ್ದೇನೆ. ಇದು ಪ್ರಪಂಚಕ್ಕೆ ಆದ ಕೆಟ್ಟ ಕಾಯಿಲೆ. ನನ್ನ ಬಗ್ಗೆ ಯಾರೂ ಯೋಚಿಸಬೇಡಿ. ನಿಮ್ಮ ಜೀವಕ್ಕೆ ದಾರಿ ಮಾಡಿದ್ದೇನೆ. ನನಗೆ ಈ ಜೀವನ ಸಾಕು.

ಡಿಸಿಸಿ ಬ್ಯಾಂಕಿನ ನನ್ನ ಖಾತೆಯಲ್ಲಿ 1.28 ಲಕ್ಷ ರೂ. ಇದ್ದು ಈ ಹಣವನ್ನು ಜಮೆ ಮಾಡಬೇಕು. ನಾನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಟ್ಟಿದ್ದೇನೆ. ನನ್ನ ಚೈನು, ಉಂಗುರ ಬೀರೂವಿನಲ್ಲಿ ಇದೆ ತೆಗೆದುಕೊಳ್ಳಿ. ನನ್ನ ಬಗ್ಗೆ ಯಾರೂ ಯೋಚಿಸಬೇಡಿ. ನನಗೆ ಜೀವನ ಸಾಕು. ನನ್ನಿಂದ ಕುಟುಂಬಸ್ಥರಿಗೆ ಯಾರಿಗೂ ಏನು ಆಗುವುದು ಬೇಡ. ನೀವೆಲ್ಲರೂ ಚೆನ್ನಾಗಿರಿ.

Comments

Leave a Reply

Your email address will not be published. Required fields are marked *