ನಾಗಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧ ಹುತಾತ್ಮ

ಬೆಳಗಾವಿ: ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧ ವೀರಮರಣ ಹೊಂದಿದ್ದಾರೆ.

ಗೋಕಾಕ್ ತಾಲೂಕಿನ ಶಿವಾಪುರ ಕೊಣ್ಣೂರ ಗ್ರಾಮದ 38 ವರ್ಷದ ಮಂಜುನಾಥ ಅಪ್ಪಣ್ಣ ಗೌಡಣ್ಣವರ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್ ಗಡಿಯಲ್ಲಿ ಗಸ್ತು ತಿರುಗುವಾಗ ಮಂಜುನಾಥ ಚಲಾಯಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ನಲ್ಲಿ ನೇಮಕಗೊಂಡು 18 ವರ್ಷಗಳಿಂದ ನಾಗಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ಅಪಘಾತ ಸಂಭವಿಸಿದೆ. ಯೋಧನ ಪಾರ್ಥಿವ ಶರೀರ ಸೋಮವಾರ ಸಂಜೆ 6 ಗ0ಟೆಗೆ ಗೋವಾ ಮಾರ್ಗವಾಗಿ ಸ್ವಗ್ರಾಮಕ್ಕೆ ಬರಲಿದೆ. ಪಾರ್ಥೀವ ಶರೀರವನ್ನು ಗೋವಾದಿಂದ ಗೋಕಾಕ್ ತಾಲೂಕಿನ ಕೊಣ್ಣೂರು ಶಿವಾಪೂರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *