ನಾನು ಓಪನ್ ಹಾರ್ಟೆಡ್ ಏನೇ ಹೇಳಿದ್ರೂ ಓಪನ್ ಆಗಿ ಹೇಳ್ತೀನಿ: ಜಮೀರ್

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನಾನು ಈಗ ಏನು ಹೇಳಲ್ಲ. ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ. ಹಾಗಾಗಿ ಹೇಳಿಕೆಗೆ ಟೋಟಲಿ ಫುಲ್ ಸ್ಟಾಪ್ ಹಾಕಿದ್ದೀನಿ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ನಾನು ನನ್ನ ಅಭಿಪ್ರಾಯ ಹೇಳಿದ್ದೀನಿ. ಸಿದ್ದರಾಮಯ್ಯ ಅವರ ಸರ್ಕಾರದ ಕೆಲಸವನ್ನು ಜನ ನೆನಪಿಸಿಕೊಳ್ತಾರೆ. ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ ಎಂದರು. ಇದನ್ನೂ ಓದಿ: ಶಾಸಕ ಜಮೀರ್​ಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ನಮ್ಮಲ್ಲಿ ಸಾಕಷ್ಟು ಜನ ಮುಖ್ಯಮಂತ್ರಿ ಪಟ್ಟಕ್ಕೆ ಅರ್ಹರಿದ್ದಾರೆ. ಯಾರು ಸಿಎಂ ಆಗಬೇಕು ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಜನರ ಅಭಿಪ್ರಾಯ ಯಾರ ಪರವಾಗಿ ಇದೆ ಅವರು ಆಗುತ್ತಾರೆ. ನಮಗೆ ನಮ್ಮ ನಾಯಕ ಸಿದ್ದರಾಮಯ್ಯ ಮಾತನಾಡಬೇಡಿ ಎಂದಿದ್ದಾರೆ. ಹಾಗಾಗಿ ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಸಿಎಂ ಸ್ಥಾನದ ಬಗ್ಗೆ ಹಲವರು ಹೇಳ್ತಿದ್ದಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಎಂದು ಎಂ.ಬಿ ಪಾಟೀಲ್ ಹೇಳ್ತಾರೆ. ಅಲ್ಪಸಂಖ್ಯಾತರಲ್ಲಿ ಸಿ.ಎಂ ಇಬ್ರಾಹಿಂ ಕೊಡಿ ಅಂತಾರೆ. ತನ್ವೀರ್ ಸೇಠ್ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ. ಯಾರು ಸಿಎಂ ಆಗಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದು ಅಭಿಪ್ರಾಯಪಟ್ಟರು.

Comments

Leave a Reply

Your email address will not be published. Required fields are marked *