ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ನವಜೋತ್ ಸಿಂಗ್ ಸಿಧು?

ನವದೆಹಲಿ: ಪಂಜಾಬ್ ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತಕ್ಕೆ ಕೈ ಕಮಾಂಡ್ ಮುಲಾಮು ಹುಡುಕಿದೆ. ರೆಬೆಲ್ ಆಗಿರುವ ನಾಯಕ ನವಜೋತ್ ಸಿಂಗ್ ಸಿಧುಗೆ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ವರದಿಯಾಗಿವೆ. ಕಾಂಗ್ರೆಸ್ ವಕ್ತಾರ ಹರೀಶ್ ರಾವತ್ ಈ ಕುರಿತ ಸಣ್ಣದಾದ ಸುಳಿವನ್ನ ಬಿಟ್ಟುಕೊಟ್ಟಿದ್ದಾರೆ.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ್ರೆ, ಜೊತೆಯಲ್ಲಿಯೇ ಇಬ್ಬರನ್ನು ಕಾರ್ಯದರ್ಶಿಗಳ ನೇಮಕವಾಗಲಿದೆ. ಈ ಕುರಿತು ಕಾಂಗ್ರೆಸ್ ಆಂತರಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಸದ್ಯ ಸುನಿಲ್ ಜಾಖಡ್ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ?

ಇನ್ನೂ 2022ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದೆ. ಹಾಗಾಗಿ ಸಿಎಂ ಅಮರೀಂದರ್ ಸಿಂಗ್, ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದ್ದು, ಹಿರಿಯರಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಸೂಚನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್

Comments

Leave a Reply

Your email address will not be published. Required fields are marked *