ಪದ್ಮನಾಭ ನಗರದ ಜೆಡಿಎಸ್ ಅಧ್ಯಕ್ಷ ವಿ.ಕೆ. ಗೋಪಾಲ್ ನಿಧನ

ಬೆಂಗಳೂರು: ಪದ್ಮನಾಭ ನಗರದ ಜೆಡಿಎಸ್ ಅಧ್ಯಕ್ಷ, ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ವಿ.ಕೆ. ಗೋಪಾಲ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿ.ಕೆ ಗೋಪಲ್ ಅವರಿಗೆ 56 ವರ್ಷ ವಯಸ್ಸಾಗಿತ್ತು. ಪುತ್ರ, ಪುತ್ರಿ ಸೇರಿ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಮೂಲತಃ ಗುತ್ತಿಗೆದಾರರಾಗಿದ್ದ ಅವರು, ಬಿಡಿಎ ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದ ವಿ.ಕೆ.  ಗೋಪಾಲ್ ಕಮ್ಮವಾರಿ ಸಂಘದಲ್ಲಿ ಆಂತರಿಕ ಲೆಕ್ಕ ಪರಿಶೋಧಕರಾಗಿದ್ದರು. ಸಂಘದ ಚಟುವಟಿಕೆಯಲ್ಲೂ ಸಕ್ರಿಯವಾಗಿದ್ದರು.

ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಪದ್ಮನಾಭನಗರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೋವಿಡ್ ಸಂಕಷ್ಟ ಸಂದರ್ಭದಲ್ಲೂ ಅವರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸಕ್ರಿಯವಾಗಿ ಸಾಕಷ್ಟು ಸ್ಪಂದಿಸಿದ್ದರು. ಇದನ್ನೂ ಓದಿ: ಮಾಜಿ ಸಚಿವ ಪ್ರೊ. ಮಮ್ತಾಜ್ ಅಲಿ ಖಾನ್ ನಿಧನ : ಗಣ್ಯರಿಂದ ಸಂತಾಪ

ಮಾಜಿ ಪ್ರಧಾನಿ, ಜೆಡಿಎಸ್ ವರಷ್ಠ ಹೆಚ್ ಡಿ ದೇವಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಚಿವ ಆರ್ ಅಶೋಕ್ ಸೇರಿದಂತೆ ಇತರರು ವಿ ಕೆ ಗೋಪಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಆರ್ ಅಶೋಕ್ ಅವರು ಅಂತಿಮ ದರ್ಶನ ಪಡೆದು ಮೃತರ ಕುಟುಂಬಕ್ಕೆ ಸ್ವಾಂತನ ಹೇಳಿ ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಸಿದ್ದಾರೆ. ಅಂತ್ಯಸಂಸ್ಕಾರ ಇಂದು ಸಂಜೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ.

 

Comments

Leave a Reply

Your email address will not be published. Required fields are marked *