ಮಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಇಂದು ಬೋಟ್ ನಲ್ಲಿ ಬಂದ ವಿಶೇಷ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ದ್ವೀಪ ಪ್ರದೇಶವಾದ ತೋಟ ಬೆಂಗ್ರೆಯ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳೂರು ನಗರಕ್ಕೆ ಬರಬೇಕಾದರೆ ತೆಪ್ಪದಲ್ಲೇ ಬರಬೇಕಾದ ಅನಿವಾರ್ಯತೆ ಇದೆ. ಆದರೆ ಇಲ್ಲಿ ರಸ್ತೆ ಮಾರ್ಗವಿದ್ದರೂ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಬರಲು ವಿದ್ಯಾರ್ಥಿಗಳು ಬೋಟ್ ಹತ್ತಿದ್ದಾರೆ.

ವಿದ್ಯಾರ್ಥಿಗಳ ಜೊತೆಗೆ ಪೋಷಕರೂ ಪರೀಕ್ಷಾ ಕೇಂದ್ರಕ್ಕೆ ಬಂದು, ಸುರಕ್ಷಿತವಾಗಿ ಮಕ್ಕಳನ್ನು ಕಳುಹಿಸಿದ್ದಾರೆ. ಕೊರೊನಾ ಆತಂಕದ ನಡುವೆಯೂ ವಿದ್ಯಾರ್ಥಿಗಳ ಈ ಪರೀಕ್ಷಾ ಉತ್ಸಾಹವನ್ನು ಗಮನಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ನಿನ್ನಯಷ್ಟೇ ಬಂಟ್ವಾಳದ ವಿದ್ಯಾರ್ಥಿ ಕೌಶಿಕ್ ತನ್ನ ಕಾಲಿನಲ್ಲೇ ಪರೀಕ್ಷೆ ಬರೆದು ಸುದ್ದಿಯಾಗಿದ್ದನು. ಈತನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಚಿವರು ವಿದ್ಯಾರ್ಥಿಯ ಛಲಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದರು.


Leave a Reply