ಪಾಕ್ ಪರ ಘೋಷಣೆ ಪ್ರಕರಣ- ಆರೋಪಿಗಳಿಗೆ ಕಾಶ್ಮೀರಕ್ಕೆ ತೆರಳಲು ನ್ಯಾಯಾಲಯ ನಿರಾಕರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪಾಕ್ ಪರ ಘೋಷಣೆ ಪ್ರಕರಣ- ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಅಮಾನತು

ಫೆಬ್ರವರಿ 15 ರಂದು ಕೆಎಲ್‍ಇ ಕಾಲೇಜಿನಲ್ಲಿ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿತ್ತು. ಈ ವೇಳೆ ಷರತ್ತು ಬದ್ಧ ಜಾಮೀನು ನೀಡಿದ್ದ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿರಲು ಅವಕಾಶ ಕಲ್ಪಿಸಲಾಗಿತ್ತು.

ಈಗ ಬೆಂಗಳೂರಿನಿಂದ ತವರು ಕಾಶ್ಮೀರಕ್ಕೆ ಹೋಗಲು ಅನುಮತಿ ಕೋರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ವಜಾಗೊಳಿಸಿ ಎರಡನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ ಮುಗೂತಿಯವರು ಆದೇಶ ನೀಡಿದ್ದಾರೆ.

ಈ ಹಿಂದೆ ಮಾರ್ಚ್ 5 ರಂದು ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಂದ ದೇಶದ್ರೋಹಿ ಘೋಷಣೆ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬೆಂಗಳೂರಿನಿಂದ ಆಗಮಿಸಿದ ವಕೀಲರು ಆರೋಪಿಗಳ ಪರ ವಾದ ಮಂಡನೆ ಮಾಡಿದ್ದರು. ಮೈತ್ರೇಯಿ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡದಿಂದ ವಾದ ಮಂಡನೆ ಮಾಡಿದ್ದು, ಬೆಂಗಳೂರಿನ ವಕೀಲರ ತಂಡವು ಹಲವು ಪ್ರಕರಣಗಳ ಉದಾಹರಣೆ ಮೂಲಕ ವಾದ ಮಂಡನೆ ಮಾಡಿದ್ದರು.

Comments

Leave a Reply

Your email address will not be published. Required fields are marked *