ಪುಣೆಯಲ್ಲಿ 7 ದಿನಗಳ ಕಾಲ ನೈಟ್ ಕರ್ಫ್ಯೂ – ಬಾರ್, ಹೋಟೆಲ್, ಧಾರ್ಮಿಕ ಸ್ಥಳಗಳು ಬಂದ್

ಮುಂಬೈ: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಪುಣೆಯ ಬಾರ್‌ಗಳು, ಹೋಟೆಲ್‍ಗಳು ಹಾಗೂ ರೆಸ್ಟೋರೆಂಟ್‍ಗಳನ್ನು 7 ದಿನಗಳವರೆಗೂ ಮುಚ್ಚುವುದರ ಜೊತೆಗೆ ಕೆಲವು ನಿರ್ಬಂಧಗಳನ್ನು ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಇದಲ್ಲದೆ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಏಪ್ರಿಲ್ 3 ರಿಂದ ಪುಣೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಿಲ್ಲೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಬಾರ್‍ಗಳು, ಹೋಟೆಲ್‍ಗಳನ್ನು 7 ದಿನಗಳ ಕಾಲ ಮುಚ್ಚಲಾಗಿದ್ದು, ಕೇವಲ ಹೋಂ ಡೆಲಿವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಅಂತ್ಯಕ್ರಿಯೆ ಮತ್ತು ವಿವಾಹ ಸಮಾರಂಭಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಅಲ್ಲದೆ ಒಂದು ವಾರ ಧಾರ್ಮಿಕ ಸ್ಥಳಗಳನ್ನು ಕೂಡ ಸಂಪೂರ್ಣವಾಗಿ ಮುಚ್ಚಬೇಕು ಪುಣೆಯ ವಿಭಾಗೀಯ ಆಯುಕ್ತರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *