ಪ್ರವಾಸಿಗರೇ ಗಮನಿಸಿ- ಹೊಗೆನಕಲ್ ಜಲಪಾತಕ್ಕಿಲ್ಲ ಪ್ರವೇಶ

ಚಾಮರಾಜನಗರ: ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಆದ್ದರಿಂದ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ.

ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧ ಮುಂದುವರಿಸಲಾಗಿದೆ. ಈ ಬಗ್ಗೆ ಕಾವೇರಿ ವನ್ಯಜೀವಿ ಧಾಮದ ಡಿಎಫ್‍ಒ ಡಾ.ರಮೇಶ್ ಮಾತನಾಡಿ, ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೊಗೆನಕಲ್ ಜಲಪಾತ ಪ್ರದೇಶ ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಕ್ಕೂ ಒಳಪಟ್ಟಿದೆ. ಎರಡೂ ರಾಜ್ಯಗಳ ಪ್ರವಾಸಿಗರು ಬರುವುದರಿಂದ ಸ್ಥಳೀಯರಲ್ಲೂ ಕೊರೊನಾ ಆತಂಕ ಮೂಡಿದೆ. ಹೀಗಾಗಿ ಸದ್ಯಕ್ಕೆ ಜಲಪಾತವನ್ನು ಪ್ರವಾಸಿಗರಿಗೆ ಮುಕ್ತ ಮಾಡದೇ ಇರುವುದು ಒಳ್ಳೆಯದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರವಾಸಿಗರಿಗೆ ಮುಕ್ತ ಮಾಡಿದರೆ ತೆಪ್ಪ ನಂಬಿಕೊಂಡು ಜೀವನ ಸಾಗಿಸುವವರ ಬದುಕು ಸಾಗುತ್ತದೆ ಎಂದಿದ್ದಾರೆ.

Comments

Leave a Reply

Your email address will not be published. Required fields are marked *