ಪ್ರೀತಂಗೌಡ ಬೆಳೆಯಬೇಕಾದ ಹುಡುಗ: ವಿ. ಸೋಮಣ್ಣ

ಮಂಡ್ಯ: ಶಾಸಕ ಪ್ರೀತಂಗೌಡ ಇನ್ನೂ ಹುಡುಗ. ಹಾಸನ ಜಿಲ್ಲೆಯಲ್ಲಿ ಇನ್ನೂ ಬೆಳೆಯಬೇಕಾದವನು. ಹೀಗಾಗಿ ಅವನು ಇತಿಮಿತಿಯಲ್ಲಿ ಇರಬೇಕು ಎಂದು ಸಚಿವ ವಿ.ಸೋಮಣ್ಣ ಚಾಟಿ ಬೀಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬಕ್ಕೆ 50 ವರ್ಷದ ರಾಜಕೀಯ ಇತಿಹಾಸವಿದೆ. ನಾನು ಸಚಿವ ಆಗಿದ್ದಾಗ ಪ್ರೀತಂಗೌಡ ಇನ್ನೂ ಹುಟ್ಟಿಯೇ ಇರಲಿಲ್ಲ. ದೇವೇಗೌಡರ ಮನೆಗೆ ಹೋಗುವುದರಲ್ಲಿ ಏನು ತಪ್ಪಿದೆ. ದೇವೇಗೌಡರು ರಾಷ್ಟದ ಪ್ರಧಾನಿಗಳಾಗಿದ್ದಂತವರು, ನಾನು ಕೂಡ ಅವರ ಮನೆಗೆ ಹೋಗಿದ್ದೇನೆ. ಪ್ರೀತಂಗೌಡ ಇನ್ನೂ ಬೆಳೆಯಬೇಕಾದ ಹುಡುಗ, ಸುಮ್ಮನೆ ಹಾಗೆಲ್ಲಾ ಮಾತನಾಡುವುದು ಸರಿ ಅಲ್ಲ ಎಂದು ಟಾಂಗ್ ಕೊಟ್ಟರು.

ಇದೇ ವೇಳೆ ಸಚಿವರ ಖಾತೆ ಅಸಮಾಧಾನ ವಿಚಾರದ ಕುರಿತು ಮಾತನಾಡಿದ ಅವರು, ಈ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಬಸವರಾಜ್ ಬೊಮ್ಮಯಿ ಅವರು ಬುದ್ಧಿವಂತರಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಒಳ್ಳೆಯ ಕೆಲಸ ಮಾಡ್ತಾ ಇದೆ. ಆಗಸ್ಟ್ 15 ರಂದು ಬೊಮ್ಮಯಿ, ಯಾರೂ ಯೋಚನೆ ಮಾಡದ ರೀತಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಾರೆ. 15 ರಿಂದ 20 ದಿವಸದಲ್ಲಿ ಸರ್ಕಾರ ಟೇಕಫ್ ಆಗಿದೆ ಎಂದ ಭಾವನೆ ಜನರಿಗೆ ಬರುತ್ತದೆ ಎಂದರು. ಇದನ್ನೂ ಓದಿ: ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

Comments

Leave a Reply

Your email address will not be published. Required fields are marked *