ಬಿಎಸ್‍ವೈಗೆ ಸಿಎಂ ಆಗಿ ಅವಧಿ ಪೂರೈಸಲು ಅವಕಾಶ ಕೊಡಿ: ಮರುಳಸಿದ್ದ ಸ್ವಾಮೀಜಿ

ಶಿವಮೊಗ್ಗ: ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕಾರ ಅವಧಿ ಪೂರೈಸಲು ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಬಸವ ಕೇಂದ್ರದ ಡಾ. ಮರುಳಸಿದ್ಧ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಜನಾಂಗದ ಆಶಯಗಳಿಗೆ ಸ್ಪಂದಿಸುತ್ತಾ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವಾಹ, ಕೋವಿಡ್ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇಂತಹ ಮುಖ್ಯಮಂತ್ರಿಗಳನ್ನು ದಿಢೀರ್ ಬದಲಾಯಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:‘ನನ್ನವರೇ ನನಗೆ ಶತ್ರುವಾದ್ರು..’ – ಆಪ್ತರ ಬಳಿ ಬಿಎಸ್‍ವೈ ಭಾವುಕ..!

ಎಲ್ಲರೂ ಒಪ್ಪಿಕೊಳ್ಳುವ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆ ಅಲ್ಲ. ಅವರಿಗೆ ನೆಮ್ಮದಿಯಿಂದ ಆಡಳಿತ ನಡೆಸಲು ಪಕ್ಷದ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಸ್ವಾಮೀಜಿಗಳ ತಂಡ ಬಿಎಸ್‍ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಬಿಎಸ್‍ವೈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದಗಂಗಾ ಸ್ವಾಮೀಜಿ, ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಮದು ಒತ್ತಾಯಿಸಿದ್ದರು. ಇದನ್ನೂ ಓದಿ:ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು: ಕಾಂಗ್ರೆಸ್ ಶಾಸಕ

Comments

Leave a Reply

Your email address will not be published. Required fields are marked *