ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದು ತಪ್ಪು ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಡ್ಯಾಮ್ ಕಟ್ಟೋಕೆ ಅವರ ಅನುಮತಿ ಯಾಕೆ ಬೇಕು? ನಮ್ಮ ಕೆಲಸ ನಾವು ಮಾಡಬೇಕು. ಕೋರ್ಟ್ ಆದೇಶದಂತೆ ನಾವು ಕೆಲಸ ಮಾಡಬೇಕು. ಇವರು ಪತ್ರ ಬರೆದಿದ್ದಕ್ಕೆ ಸ್ಟಾಲಿನ್ ಪ್ರತಿಕ್ರಿಯಿಸಿದ್ದಾರೆ. ಪತ್ರ ಬರೆದು ಅನುಮತಿ ಕೇಳಿದ್ರೆ ಯಾರೂ ಒಪ್ಪಲ್ಲ. ಡ್ಯಾಮ್ ಕಟ್ಟುವುದರಿಂದ ಅವರ ಪಾಲಿನ ನೀರಿಗೆ ಸಮಸ್ಯೆ ಆಗುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ನೀರಿನ ವಿಚಾರದಲ್ಲಿ ಪತ್ರ ಬರೆದು ಅನುಮತಿ ಕೇಳಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

ಸಿಎಂ ಜೊತೆ ವಿಪಕ್ಷಗಳು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂಬ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂತಹ ಭ್ರಷ್ಟಾಚಾರ ಸರ್ಕಾರದಲ್ಲಿ ಇವರೇಕೆ ಶಾಸಕನಾಗಿ ಮುಂದುವರಿಯಬೇಕು ಬಹಳ ದಿನದಿಂದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಂತಹ ಕಡೆ ಶಾಸಕನಾಗಿ ಮುಂದುವರೆದಿದ್ದು ಯಾಕೆ? ನಮ್ಮ ಬಗ್ಗೆ ಮಾತನಾಡುವುದಕ್ಕೆ ಇವರಿಗೆ ಅಧಿಕಾರ ಇಲ್ಲ ಎಂದರು.

ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದ ಸಂಸದೆ ಸುಮಲತಾ ಅವರನ್ನು ಅಡ್ಡವಾಗಿ ಮಲಗಿಸಿ ಎಂದು ಎಚ್ಡಿಕೆ ಹೇಳಿಕೆ ವಿಚಾರವಾಗಿ ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.

Leave a Reply