ಬಿಗ್‍ಬಾಸ್ 8ಕ್ಕೆ ಕ್ಷಣಗಣನೆ- ಜೋಯಿಸರ ಅವತಾರದಲ್ಲಿ ಕಿಚ್ಚನ ಫೋಟೋ ವೈರಲ್

ಬೆಂಗಳೂರು: ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಬಿಗ್‍ಬಾಸ್ ರಿಯಾಲಿಟಿ ಶೋಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಇನ್ನಷ್ಟು ಮಜಾ ನೀಡಲು ಬರುತ್ತಿದ್ದಾರೆ.

ಬಿಗ್‍ಬಾಸ್ ಕಾರ್ಯಕ್ರಮ ಪ್ರಸಾರವಾಗುವ ಖಾಸಗಿ ವಾಹಿನಿಯವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಕಿಚ್ಚ ಅವರ ಹೊಸ ಫೋಟೋವನ್ನು ಹಂಚಿಕೊಂಡು ಇನ್ನೊಂದು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಸುದೀಪ್ ಜೋಯಿಸರ ಅವರತಾರದಲ್ಲಿರುವ ಫೋಟೋವನ್ನು ಹಂಚಿಕೊಂಡು ಲಾಕ್ ಡೌನ್ 8.0ಗೆ ಕಿಚ್ಚ ಜೋಯಿಸರು ಇಟ್ಟಿರೋ ಮುಹೂರ್ತ ಯಾವುದು? ಗೆಸ್ ಮಾಡಿ, ಕಮೆಂಟ್‍ನಲ್ಲಿ ಹೇಳಿ ಎಂದು ಬರೆದುಕೊಂಡು ಬಿಗ್ ಬಾಸ್ ತಂಡದಿಂದ ಹೊಸ ಮಾಹಿತಿಯನ್ನು ಹೊರಹಾಕಿದ್ದಾರೆ.

ಪ್ರತಿ ಸೀಸನ್‍ನಲ್ಲಿಯೂ ವಿಭಿನ್ನವಾಗಿ ಕಾಣಿಸಿಕೊಳ್ಳುವ ಸುದೀಪ್ ಅವರು ಇದೀಗ ಜೋಯಿಸರ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಇನ್ನಷ್ಟು ಕ್ಯೂರಾಸಿಟಿ ಬಿಗ್ ಬಾಸ್ ಕಾರ್ಯಕ್ರಮದ ಮೇಲಿದೆ.

ಈಗಾಗಲೇ ಸಾಕಷ್ಟು ಅಭಿಮಾನಿಗಳು ಬಿಗ್‍ಬಾಸ್ ಸೀಸನ್ 8 ಗಾಗಿ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಬಿಗ್ ಬಾಸ್ ತಂಡ ದಿನಕ್ಕೊಂದು ಮಾಹಿತಿಯನ್ನು ನೀಡುತ್ತಾ ಎಲ್ಲರ ಕೌತುಕವನ್ನು ಇನ್ನಷ್ಟು ಹೆಚ್ಚು ಮಾಡುತ್ತಿದೆ. ಸೀಸನ್ 8 ಕ್ಕೆ ಯಾವೆಲ್ಲ ಸೆಲೆಬ್ರಿಟಿಗಳು ಹೋಗಬಹುದು ಎಂಬ ಕುರಿತಾಗಿ ನಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕೆಲವು ಹೆಸರುಗಳನ್ನು ಹೇಳುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಪ್ರೋಮೋ ಶೂಟ್‍ನಲ್ಲಿ ಭಾಗವಹಿಸಿರುವ ಫೋಟೋವನ್ನು  ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಬಿಗ್ ಬಾಸ್ ಸೀಸನ್ 8ರ ಪ್ರೋಮೋ ನಡೆಯುತ್ತಿದೆ. ಸದ್ಯದಲ್ಲೇ ಕಾರ್ಯಕ್ರಮ ಆರಂಭವಾಗಲಿದೆ ಎಂದು ಸುದೀಪ್ ಬರೆದುಕೊಂಡಿದ್ದರು. ನಂತರ ಕೆಲವು ದಿನಗಳ ನಂತರ ಪ್ರೋಮೋ ಖಾಸಗಿ ವಾಹಿನಿ ಹೊರಬಿಟ್ಟಿದ್ದು, ಕಿಚ್ಚ ಅದನ್ನು ರೀ ಟ್ವೀಟ್ ಮಾಡಿ ಬಿಗ್‍ಬಾಸ್ ಕನ್ನಡ ಸೀಸನ್-8 ಬರ್ತಿದೆ. ನೀವು ಮುಂದಿನ 100 ದಿನದ ಮನರಂಜನೆಗಾಗಿ ತಯಾರಾಗಿ ಎಂದು ಬರೆದುಕೊಂಡಿದ್ದರು. ಈ ಮೂಲಕವಾಗಿ ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ಕೊಟ್ಟು ನೀರಿಕ್ಷೆಯ ಮಟ್ಟವನ್ನು ಇನ್ನಷ್ಟು ಹೆಚ್ಚಿಸಿದ್ದರು.

Comments

Leave a Reply

Your email address will not be published. Required fields are marked *