ಬಿಜೆಪಿಯಲ್ಲಿ ಪ್ರಜಾಪ್ರಭುತ್ವವೇ ಇಲ್ಲ, ಯಡಿಯೂರಪ್ಪರನ್ನ ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ರು: ಸಿದ್ದರಾಮಯ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಶಾಸಕರಿಂದ ಆಯ್ಕೆಯಾಗಿದ್ದ ಯಡಿಯೂರಪ್ಪರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿಯಾದವರು, ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆಯಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಲಪ್ರಭಾ ನದಿ ನೀರು ಊರೊಳಗೆ ನುಗ್ಗಿದ ಪರಿಣಾಮ ಬೆಳಗಾವಿ ಜಿಲ್ಲೆಯ ದುರ್ಗಾನಗರ ಮತ್ತು ಮಾರುತಿ ನಗರ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಊರಿನ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆಯಾದರೂ ಅಲ್ಲಿ ಅಗತ್ಯ ಸೌಲಭ್ಯ ನೀಡಿಲ್ಲ. ಹಾಗಾಗಿ ಇಂದು ಅಧಿಕಾರಿಗಳ ಸಭೆ ನಡೆಸಿ, ಅವರಿಗೆ ಸೂಚನೆ ನೀಡಿದ್ದೇನೆ. ಹೆಚ್ಚು ಮಳೆಯಾದಗಲೆಲ್ಲಾ ಊರೊಳಗೆ ನೀರು ನುಗ್ಗುತ್ತಿದೆ, ಇದನ್ನು ತಪ್ಪಿಸಲು ನಾಲೆಗೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ರೂ. 13 ಕೋಟಿ ವೆಚ್ಚದಲ್ಲಿ ತಡೆಗೋಡೆಯ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ. ತಡೆಗೋಡೆ ನಿರ್ಮಾಣ ಕುರಿತು ಸರ್ಕಾರದ ಜೊತೆ ನಾನು ಮಾತನಾಡುತ್ತೇನೆ. ಇದನ್ನೂ ಓದಿ:ಯಡಿಯೂರಪ್ಪನವರ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದೆ: ಅರುಣ್ ಸಿಂಗ್

ಬೆಳಗಾವಿ – ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆ. ಈ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆಯುತ್ತೇನೆ. ಕೆಲವು ಮನೆಗಳಲ್ಲಿ ಮೂರು – ನಾಲ್ಕು ಕುಟುಂಬಗಳು ವಾಸವಿರುತ್ತವೆ. ಅಂತಹಾ ಮನೆಗಳು ಪ್ರವಾಹದಿಂದ ಬಿದ್ದುಹೋದರೆ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಮನೆ ಕಟ್ಟಿಸಿಕೊಡುವಂತೆ ನಾನು ಈ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಅಂತಹಾ ಕುಟುಂಬಕ್ಕೆ ಕೇವಲ ಒಂದು ಮನೆ ಕಟ್ಟಿಸಿಕೊಟ್ಟು ಕೈತೊಳೆದುಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಅದೃಷ್ಟದ ಹೋಟೆಲ್‍ನಲ್ಲಿ ನೂತನ ಸಿಎಂ ಆಯ್ಕೆ

Comments

Leave a Reply

Your email address will not be published. Required fields are marked *