ಬಿಜೆಪಿ ಆಡಳಿತ ಟೀಕಿಸುವ ನೈತಿಕತೆ ಕಾಂಗ್ರೆಸ್‍ಗೆ ಉಳಿದಿಲ್ಲ: ಬಿ.ವೈ.ವಿಜಯೇಂದ್ರ

– ಎಕ್ಸಾಂ ಬರೆದಾಗಿ ರಿಸಲ್ಟ್ ಸಹ ಬಂದಾಗಿದೆ

ಮೈಸೂರು: ರಾಜ್ಯ ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೆ ಉಳಿದಿಲ್ಲ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದನ್ನ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ. ಇದೇ ವೇಳೆ ಅವರು ತಮ್ಮ ರಾಜಕೀಯ ಭವಿಷ್ಯದ ಪ್ರಶ್ನೆಗೆ ಉತ್ತರಿಸಿ, ನಾನು ಚುನಾವಣೆಗೆ ನಿಲ್ಲಬೇಕೋ ಅಥವಾ ಬೇಡ್ವೋ? ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಅದಬನ್ನು ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ ಎಂದರು.

ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ. ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟರೆ ಪರಿಹಾರ ನೀಡಿ – ಸುಪ್ರೀಂ ಮಹತ್ವದ ಆದೇಶ

ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ:
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಮುಗಿದ ಅಧ್ಯಾಯ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ. ಈ ಬಗ್ಗೆ ಇನ್ನೂ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಖಂಡರು ದೆಹಲಿಗೆ ಹೋಗುವುದು ಅವರ ವೈಯಕ್ತಿಕ ವಿಚಾರ. ಅದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ. ಎಕ್ಸಾಂ ಬರೆದಾಗಿದೆ ರಿಸಲ್ಟ್ ಕೂಡ ಬಂದಿದೆ. ಇನ್ನೂ ಈ ಬಗ್ಗೆ ಗೊಂದಲಗಳು ಬೇಡ ಎಂದರು. ಇದನ್ನೂ ಓದಿ: ಯತ್ನಾಳ್ ಪರ ಸದಾ ಕಾಲ ಇರುತ್ತೇನೆ: ಸಿ.ಪಿ ಯೋಗೇಶ್ವರ್

Comments

Leave a Reply

Your email address will not be published. Required fields are marked *