ಕೋಲ್ಕತ್ತಾ: ಮದುವೆ ಮನೆಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಪರಿಣಾಮ 6 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ಸಂದರ್ಭ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ಕಚ್ಛಾ ಬಾಂಬ್‍ಗಳನ್ನು ಎಸೆದು ಪರಾರಿಯಾಗಿದ್ದಾರೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಕ್ಯಾನಿಂಗ್ ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
https://twitter.com/ANI/status/1368026891693686785
ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರನ್ನು ಶೋವನ್ ದೇಬ್‍ನಾಥ್, ವಿಕ್ರಮ್ ಶಿಲ್, ಅರ್ಪಣ್ ದೇಬ್‍ನಾಥ್, ಸ್ವಪನ್ ಕುರಳಿ, ಮಹಾದೇವ್ ನಾಯಕ್ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಗಾಯಗೊಂಡ ಬಿಜೆಪಿ ಕಾರ್ಯಕರ್ತರು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.
ಕೆಲವು ದುಷ್ಕರ್ಮಿಗಳೊಂದಿಗೆ ಬಿಜೆಪಿ ನಾಯಕ ವರುಣ್ ಪ್ರಮಣಿಕ್ ಬಾಂಬ್ ಹಾಕಲು ಪ್ರಯತ್ನಿಸಿದಾಗ ಅದು ಸ್ಫೋಟಗೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಜಯಂತ್ ನಾಸ್ಕರ್ ಪ್ರತ್ಯಾರೋಪ ಮಾಡಿದ್ದಾರೆ.

Leave a Reply