ಬಿಜೆಪಿ ವ್ಯಾಕ್ಸಿನ್ ಮೇಲೆ ನಂಬಿಕೆ ಇಲ್ಲ ಎಂದಿದ್ದ ಅಖಿಲೇಶ್ ಯಾದವ್ ತಂದೆಯೇ ಲಸಿಕೆ ಪಡೆದ್ರು

– ತಂದೆಯಿಂದಾದರೂ ಮಗ ಪ್ರೇರಣೆ ಪಡೆಯಲಿ ಎಂದು ಬಿಜೆಪಿ ತಿರುಗೇಟು

ಲಕ್ನೋ: ಬಿಜೆಪಿ ವ್ಯಾಕ್ಸಿನ್ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಗುರಿಯಾಗಿದ್ದ ಸಮಾಜವಾದಿ ಪಕ್ಷ(ಎಸ್‍ಪಿ)ದ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ತಂದೆ ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಇಂದು ಲಸಿಕೆ ಪಡೆದಿದ್ದಾರೆ. ಈ ವಿಚಾರ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ತಂದೆಯಿಂದಾದರೂ ಮಗ ಪ್ರೇರಣೆ ಪಡೆಯಲಿ ಎಂದು ಬಿಜೆಪಿ ತಿರುಗೇಟು ನೀಡಿದೆ.

ಸೋಮವಾರ ಮುಲಾಯಂ ಸಿಂಗ್ ಯಾದವ್ ಲಸಿಕೆ ಪಡೆದಿರುವ ಫೋಟೋವನ್ನು ಪಕ್ಷದ ಅಧೀಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಆದರೆ ಅವರು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೋ ಅಥವಾ ಎರಡನೇ ಡೋಸ್ ಪಡೆದಿದ್ದಾರೋ ಎಂಬುದರ ಕುರಿತು ಮಾಹಿತಿ ಹಂಚಿಕೊಂಡಿಲ್ಲ. 81 ವರ್ಷದ ಯಾದವ್ ಮೇದಂತ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಇದನ್ನೂ ಓದಿ: ಮೊದಲು ಮೋದಿ ಲಸಿಕೆ ತೆಗೆದುಕೊಳ್ಳಲಿ, ನಂತ್ರ ನಾವು ಪಡೆದುಕೊಳ್ತೀವಿ: ತೇಜ್ ಪ್ರತಾಪ್ ಯಾದವ್

ಮುಲಾಯಂ ಸಿಂಗ್ ಯಾದವ್ ಲಸಿಕೆ ಪಡೆಯುತ್ತಿದ್ದಂತೆ ಉತ್ತರ ಪ್ರದೇಶದ ಬಿಜೆಪಿ ಅಖಿಲೇಶ್ ಯಾದವ್ ಅವರಿಗೆ ಟಾಂಗ್ ನೀಡಿದ್ದು, ಯಾದವ್ ಅವರು ಲಸಿಕೆ ಪಡೆಯುವ ಮೂಲಕ ಉತ್ತಮ ಸಂದೇಶ ರವಾನಿಸಿದ್ದಾರೆ. ಎಸ್‍ಪಿ ಅಧ್ಯಕ್ಷ ಹಾಗೂ ಕಾರ್ಯಕರ್ತರು ಇವರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಇದನ್ನೂ ಓದಿ: ಬಿಜೆಪಿ ಲಸಿಕೆ ತೆಗೆದುಕೊಳ್ಳಲ್ಲ ಅಂದಿದ್ದ ಅಖಿಲೇಶ್ ಯಾದವ್‍ಗೆ ಕೊರೊನಾ ಪಾಸಿಟಿವ್

ಉತ್ತಮ ಸಂದೇಶ, ಎಸ್‍ಪಿ ಅಧ್ಯಕ್ಷ ಹಾಗೂ ಕಾರ್ಯಕರ್ತರು ತಮ್ಮ ಪಕ್ಷ ಸಂಸ್ಥಾಪಕರನ್ನು ಪ್ರೇರಣೆಯಾಗಿ ಪಡೆಯಲಿದ್ದಾರೆ ಎಂಬ ಭರವಸೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಹಿಂದೆ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಬಿಜೆಪಿ ಲಸಿಕೆಯಲ್ಲಿ ನನಗೆ ನಂಬಿಕಲೆ ಇಲ್ಲ ಎಂದು ಹೇಳುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಸದ್ಯಕ್ಕೆ ನಾನು ಲಸಿಕೆ ಹಾಕಲು ಹೋಗುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬುವುದು ಎಂದು ಪ್ರಶ್ನಸಿದ್ದರು. ನಮ್ಮ ಸರ್ಕಾರ ರಚನೆಯಾದಾಗ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *