ಬುಧವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರಲ್ಲ, ನೈಟ್‌ ಕರ್ಫ್ಯೂ ಮುಂದುವರಿಯುತ್ತೆ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಲಾಕ್‌ಡೌನ್‌ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇ ಪದೇ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ.

ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ ಬಿಎಸ್ ವೈ ಖಡಕ್ ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಸೋಮಣ್ಣ, ಲಾಕ್ ಡೌನ್ ವಿಸ್ತರಣೆ ಬೇಡ, ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. ಲಾಕೂ ಇಲ್ಲ, ಡೌನೂ ಇಲ್ಲ. ಸಿಎಂ ವಲಯವಾರು ಬಗ್ಗೆ ಪರಿಶೀಲನೆ ಮಾಡುತ್ತಾರೆ ಎಂದು ತಿಳಿಸಿದರು.

ಭಾನುವಾರ ಕರ್ಫ್ಯೂ ಇರುತ್ತದೆ. ಇದರ ಜೊತೆ ನೈಟ್ ಕರ್ಫ್ಯೂ ಇರುತ್ತದೆ. ಬುಧವಾರದಿಂದ ಲಾಕ್ ಡೌನ್ ಇರುವುದಿಲ್ಲ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *