ಬೆಂಕಿ ಅವಘಡ – ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಕೋಲ್ಕತ್ತಾ: 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಜನ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದ ಸ್ಟ್ಯಾಂಡ್ ರಸ್ತೆಯಲ್ಲಿ ನಡೆದಿದೆ. ಈ ಅವಘಡ ಕುರಿತಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿ ಪರಿಹಾರ ಘೋಷಿಸಿದ್ದಾರೆ.

ಕೋಲ್ಕತ್ತಾದಲ್ಲಿ ಸಂಭವಿಸಿರುವ ದುರಂತದಿಂದ ಪ್ರಾಣಹಾನಿ ಉಂಟಾಗಿರುವುದು ನೋವು ತಂದಿದೆ. ಈ ದುಃಖದ ಸಮಯದಲ್ಲಿ ಮೃತದ ಕುಟುಂಬಸ್ಥರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಬೇಗನೆ ಗುಣಮುಖರಾಗಲೇಂದು ಹಾರೈಸುತ್ತೇನೆ. ಈ ಬೆಂಕಿ ದುರಂತದಿಂದ ಪ್ರಾಣ ಕಳೆದುಕೊಂಡವರ ರಕ್ತಸಂಬಂಧಿಗಳಿಗೆ ಪಿಎಂಎನ್‍ಆರ್‍ಎಫ್‍ನಿಂದ ತಲಾ 2 ಲಕ್ಷ ರೂ. ರೂ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಕೊಡುತ್ತೇವೆ ಎಂದು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ಸಂಜೆ ನೈ ಕೊಹಿಲಾ ಘಾಟ್ ಬಳಿ ಕಟ್ಟಡವೊಂದರ 13 ನೇ ಅಂತಸ್ತಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣವೇ ಸ್ಥಳಕ್ಕೆ 25 ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸುವ ಕಾರ್ಯವನ್ನು ಸಿಬ್ಬಂದಿ ಮಾಡುತ್ತಿದ್ದರು. 5 ಜನ ಅಗ್ನಿಶಾಮದಳ ಸಿಬ್ಬಂದಿ, ಒಬ್ಬ ಪೊಲೀಸ್ ಎಎಸ್‍ಐ, ಒಬ್ಬ ರೇಲ್ವೆ ಅಧಿಕಾರಿ ಹಾಗೂ ಸೆಕ್ಯೂರಿಟಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಎಂಟು ಜನ ಕಾಣಿಸುತ್ತಿಲ್ಲ. ಬೆಂಕಿ ನಿಯಂತ್ರಣಕ್ಕೆ ತರಲಾಗಿದ್ದು, ಕಾಣೆಯಾದವರ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ ಪೊಲೀಸ್ ಕಮೀಷನರ್ ಅವರಿಂದ ಮಾಹಿತಿ ಪಡೆದುಕೊಂಡು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸಹ ನೀಡಲಾಗುವುದು ಎಂದು ಘೋಷಿಸಿದರು.

Comments

Leave a Reply

Your email address will not be published. Required fields are marked *