ಬೆಂಗಳೂರು: ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಸುಮಿತ್ರಮ್ಮ(55) ಮತ್ತು ಶಿವರಾಜ್(25) ಎಂದು ಗುರುತಿಸಲಾಗಿದೆ. ಈ ಘಟನೆ ಹೆಬ್ಬಾಳ ಬಳಿಯ ಬ್ಯಾಟರಾಯನಪುರ ಮುಖ್ಯ ರಸ್ತೆಯ ಮನೆಯಲ್ಲಿ ನಡೆದಿದೆ.

ಮನೆ ಡೋರ್ ಲಾಕ್ ಮಾಡಿಕೊಂಡು ತಾಯಿ-ಮಗ ಆತ್ಮಹತ್ಯೆ ಶರಣಾಗಿದ್ದಾರೆ. ಸಂಜೆಯಿಂದ ಮಗಳ ಕರೆ ಮಾಡುತ್ತಿದ್ದರು. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಆತಂಕಗೊಂಡು ಮನೆಯ ಬಳಿ ಬಂದಿದ್ದಾರೆ. ಮನೆ ಬಾಗಿಲು ಲಾಕ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply