ಬೆಂಗಳೂರು ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್‌ ರಾವ್‌ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಭಾಸ್ಕರ್‌ ‌ ರಾವ್‌ ಕಾರು ಚಾಲಕ ಕೋವಿಡ್‌ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್‌ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಭಾಸ್ಕರ್‌ ರಾವ್‌, ಚಾಲಕನಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಹೋಂ ಕ್ವಾರಂಟೈನ್‌ ಆಗಲಿದ್ದೇನೆ. 3 ತಿಂಗಳ ನಂತರ ಐದನೇ ಬಾರಿಗೆ ಸೋಮವಾರ ಮತ್ತೆ ಪರೀಕ್ಷೆಗೆ ಒಳಗಗಾಗಲಿದ್ದೇನೆ. ಹಲವಾರು ಪಾಸಿಟಿವ್‌ ಪ್ರಕರಣ ಹೊಂದಿದವರ ಜೊತೆ ಸಂವಹನ ಮಾಡಿದ್ದೇನೆ. ನಿಮ್ಮ ಶುಭ ಹಾರೈಕೆಗಳಿಂದ ಪಾಸಿಟಿವ್‌ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ.

 

ಕಳೆದ ವಾರ ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದರು.

ತಮ್ಮ ಆರೋಗ್ಯ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದ ಅವರು, ಕಚೇರಿಯ ಸಿಬ್ಬಂದಿಯಲ್ಲಿ ರೋನಾ ಪತ್ತೆಯಾಗಿದೆ. ಹೀಗಾಗಿ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆಂದು ಎಂದು ತಿಳಿಸಿದ್ದರು.

Comments

Leave a Reply

Your email address will not be published. Required fields are marked *