ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ ಮತ್ತಷ್ಟು (200) ಬಸ್ಸುಗಳನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಕೊರೊನಾ ಆತಂಕ ಮತ್ತು ಲಾಕ್‍ಡೌನ್ ನಿಂದಾಗಿ ಇಂದು ಬೆಳಗ್ಗೆಯಿಂದಲೇ ಬೆಂಗಳೂರು ಬಿಡುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಅವಸರದಲ್ಲಿ ಜನರಿದ್ದಾರೆ. ಇನ್ನು ಕೆಲವರು ಮನೆಗಳನ್ನು ಖಾಲಿ ಮಾಡಿಕೊಂಡು ಗಂಟು ಮೂಟೆ ಸಹಿತ ಊರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *