ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ ಕೊರೊನಾ ದೃಢ

ಬೆಳಗಾವಿ: ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೋವಿಡ್ ಗುಣಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಫೇಸ್‍ಬುಕ್‍ನಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಮನವಿ ಮಾಡಿದ್ದಾರೆ.

ಕೋವಿಡ್ ತಪಾಸಣೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ…

Posted by Mangal Suresh Angadi on Monday, 26 April 2021

 

ಸದ್ಯ ಬೆಳಗಾವಿ ಸಂಪಿಗೆ ರಸ್ತೆಯ ನಿವಾಸದಲ್ಲಿ ಮಂಗಳ ಅಂಗಡಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸೋಂಕು ದೃಢಪಟ್ಟಿದ್ದು ಇದೀಗ ಅವರ ಸಂಪರ್ಕದಲ್ಲಿ ಇದ್ದವರು ತಪಾಸಣೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೊರೊನಾ ಮೊದಲ ಅಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು, ಇದೀಗ ಅವರ ಪತ್ನಿಗೆ ಸೋಂಕು ತಗುಲಿದೆ.

Comments

Leave a Reply

Your email address will not be published. Required fields are marked *