ಬೆಳಗ್ಗೆ 3:34ಕ್ಕೆ ವಿಜಯ್ ನಿಧನ – ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

ಕುಟುಂಬದ ಇಚ್ಛೆಯಂತೆ 2 ಕಿಡ್ನಿ, 2 ಕಣ್ಣು, ಯಕೃತ್ತು, ಶ್ವಾಸಕೋಶ, 2 ಹೃದಯದ ಕವಾಟಗಳನ್ನು ದಾನ ಮಾಡಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದವರಿಗೆ ಜೋಡಿಸಲಾಯಿತು. ಇದನ್ನೂ ಓದಿ : ಹೆಲ್ಮೆಟ್ ಹಾಕಿದ್ರೆ ವಿಜಯ್ ಪ್ರಾಣಕ್ಕೆ ಕಂಟಕವಾಗ್ತಿರ್ಲಿಲ್ಲ: ಡಾ. ಅರುಣ್ ನಾಯ್ಕ್

ಬೆಳಗ್ಗೆ 6:50ಕ್ಕೆ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ವಿಜಯ್ ಕುಟುಂಬಕ್ಕೆ ನೀಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ಮೃತ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ.

Comments

Leave a Reply

Your email address will not be published. Required fields are marked *