ಮಗಳ ಸಾವಿನ ಸುದ್ದಿ ಕೇಳಿ ತಂದೆ ಹೃದಯಾಘಾತದಿಂದ ಸಾವು

ಕಾರವಾರ: ಅನಾರೋಗ್ಯದಿಂದ ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.

ಕಾವ್ಯ ರಾಮ ಗೊಂಡ(15), ರಾಮ ಸುಕ್ರ ಗೊಂಡ (46) ಮೃತರಾಗಿದ್ದಾರೆ. ಭಟ್ಕಳದ ಮಾರುಕೇರಿ ಹೆಜ್ಜಿಲು ಗ್ರಾಮದ ನಿವಾಸಿಗಳಾಗಿದ್ದಾರೆ. ಮಗಳು ಸಾವನ್ನಪಿರುವ ಸುದ್ದಿ ತಿಳಿಯುತ್ತಿದ್ದಂತೆ ತಂದೆಯೂ ಪ್ರಾಣ ಬಿಟ್ಟಿದ್ದಾರೆ. ಇದನ್ನೂ ಓದಿ: ಶುಭಾಗೆ ಆಟ ಮಂಜುಗೆ ಪರದಾಟ- ಬಿಗ್‍ಬಾಸ್ ಕೊಟ್ರು ಹೊಸ ಟ್ವಿಸ್ಟ್

ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕಾವ್ಯ ಇಂದು ಉಸಿರಾಟದ ತೊಂದರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಳು. ಈ ವಿಷಯ ಮನೆಯಲ್ಲಿ ಇದ್ದ ಈಕೆಯ ತಂದೆ ರಾಮ ಸುಕ್ರ ಗೊಂಡ ಅವರಿಗೆ ತಿಖಳಿಸಲಾಗಿದೆ. ಈ ವೇಳೆ ಮಗಳ ಸಾವಿನ ಸುದ್ದಿ ತಿಳಿಯುತಿದ್ದಂತೆ ಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಸ್‍ಗೆ ಬಿಗ್ ಟ್ವಿಸ್ಟ್ – ಆರೋಪಿ ಜೊತೆ ನಿರ್ಮಾಪಕ ಉಮಾಪತಿಗೆ ನಂಟು!

 

ವಿದ್ಯಾರ್ಥಿನಿಯು ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದಳು. ಈ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು. ಈಕೆ ಇದಕ್ಕಿಂದ್ದಂತೆ ಕಳೇದ ಎರಡು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದು, ಸೋಮವಾರ ಬೆಳಿಗ್ಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಒಂದೇ ದಿನದಲ್ಲಿ ಈ ಕುಟುಂಬ ಎರಡು ಸಾವು ಕಂಡಂತಾಗಿದೆ.

Comments

Leave a Reply

Your email address will not be published. Required fields are marked *