ಮದುವೆಗೆ ಹೋಗಿ ಕೊರೊನಾ ತಂದುಕೊಳ್ಳಬೇಡಿ – ಉಡುಪಿ ಡಿಸಿ ವಿನಂತಿ

ಉಡುಪಿ: ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳಿನಿಂದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ವಿಮರ್ಶೆ ಮಾಡಿ ನೋಡಿದಾಗ ಮದುವೆ ಮನೆಗಳಲ್ಲೇ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಉಡುಪಿ ಡಿಸಿ ಜಿ ಜಗದೀಶ್ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ನಾನು ಜಿಲ್ಲೆಯ ಅನೇಕ ಸೋಂಕಿತರ ಮನೆಗಳಿಗೆ, ಐಸೊಲೇಟೇಡ್ ಆದವರನ್ನು ಸಂಪರ್ಕಿಸಿದ್ದೇನೆ. ಇಲ್ಲಿ ತಿಳಿದ ವಿಷಯವೆಂದರೆ ಮದುವೆ ಸಮಾರಂಭಗಳಿಗೆ, ಮೆಹಂದಿ ಮತ್ತಿತರ ಕಾರ್ಯಕ್ರಮಗಳಿಗೆ ಹೋದವರಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ. ಗುಂಪಾಗಿ ಅಗತ್ಯ ವಸ್ತು ಖರೀದಿಸುವವರಿಗೂ ಸೋಂಕು ತಗುಲಿದೆ. ಆದ್ದರಿಂದ ಯಾವುದೇ ಸಮಾರಂಭಗಳಿಗೂ ಹೋಗಬೇಡಿ. ಗುಂಪು ಸೇರಬೇಡಿ ಎಂದು ಕೈಮುಗಿದು ಡಿಸಿರವರು ಮನವಿ ಮಾಡಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್‍ಡೌನ್‍ಗೆ ಹೋಗುವುದು ತಪ್ಪಲಿದೆ ಎಂದರು.

Comments

Leave a Reply

Your email address will not be published. Required fields are marked *