ಮದುವೆ ಸಂಭ್ರಮ – ಡಿಕೆಶಿ ಪುತ್ರಿಯ ಅರಿಶಿನ ಶಾಸ್ತ್ರ

ಬೆಂಗಳೂರು: ಮದುವೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಪುತ್ರಿ ಐಶ್ವರ್ಯ ಅರಿಶಿನ ಶಾಸ್ತ್ರ ನಡೆಯಿತು.

ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಬುಧವಾರ ಅರಿಶಿನ ಶಾಸ್ತ್ರ ನಡೆದಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಭಾಗಿಯಾಗಿದ್ದರು.

 

ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ್‌ ಅವರ ಪುತ್ರ ಅಮರ್ಥ್ಯ ಸಿದ್ದಾರ್ಥ್ ಮತ್ತು ಐಶ್ವರ್ಯ ಅವರ ವಿವಾಹ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸುವ ಸಾಧ್ಯತೆಯಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದರೆ, ಫೆಬ್ರವರಿ 17 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮರ್ಥ್ಯ ಅವರು, ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾದ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ.ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ಧಾರೆ.

Comments

Leave a Reply

Your email address will not be published. Required fields are marked *