ಮಡಿಕೇರಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿ, ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹಾರ್ತಿಬೈಲ್ ಬಳಿ ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯನ್ನು ಸರೋಜಿನಿ(60) ಎಂದು ಗುರುತಿಸಲಾಗಿದೆ. ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.
ಸಂಜೀವಿನಿ ಒಬ್ಬರೇ ರಾತ್ರಿ ಸಮಯದಲ್ಲಿ ಮನೆಯಲ್ಲಿ ಇದ್ದರು. ಇದೇ ಸಂದರ್ಭದಲ್ಲಿ ಬಂದ ಮುಸುಕುಧಾರಿಗಳು ಮಹಿಳೆಗೆ ಹಲ್ಲೆ ಮಾಡಿ ಕತ್ತು ಹಿಸುಕಿದ್ದಾರೆ. ಅಲ್ಲದೆ ಮನೆಯಲ್ಲಿ ಇದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಯ ಬಗ್ಗೆ ಮಾಹಿತಿ ಅರಿತ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಕುಶಾಲನಗರದ ಡಿವೈಎಸ್ ಪಿ ಶೈಲೇಂದ್ರ ಕುಮಾರ್ ಶ್ವಾನದಳ, ಬೆರಳಚ್ಚು ಗಾರರ ತಂಡ ಘಟನ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.


Leave a Reply