ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಗಿಫ್ಟ್ – ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ.

ಹೌದು. ರಾಜ್ಯಸಭೆ ಆಯ್ಕೆ ಬಳಿಕ ಇದೀಗ ಹೈಕಮಾಂಡ್ ಮತ್ತೊಂದು ಗಿಫ್ಟ್ ನೀಡಿದ್ದು, ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದೆ. ಈ ಸಂಬಂಧ ರಾಜ್ಯಸಭೆ ಸಭಾಧ್ಯಕ್ಷರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ವೆಂಕಯ್ಯ ನಾಯ್ಡು ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.

ವಿಪಕ್ಷ ನಾಯಕರಾಗಿದ್ದ ಗುಲಾಂನಬೀ ಆಜಾದ್ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಜವಾಬ್ದಾರಿ ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಮಲ್ಲಿಕಾರ್ಜುನ ಖರ್ಗೆಗೆ ಈ ಮೂಲಕ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ. ಇದನ್ನೂ ಓದಿ: ಗುಲಾಂ ನಬಿ ಆಜಾದ್‌ ಕಾರ್ಯ ನೆನೆದು ಭಾವುಕರಾದ ಪ್ರಧಾನಿ ಮೋದಿ

Comments

Leave a Reply

Your email address will not be published. Required fields are marked *