ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

ಮಂಡ್ಯ: ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ನೆನೆಯುವ ಮೂಲಕ ಮಹಿಳೆಯರ ಸಬಲೀಕರಣ ಮಾಡಲು ಮಾರ್ಚ್ 8 ರಂದು ವಿಶ್ವ ಮಹಿಳಾ ದಿನವೆಂದು ಆಚರಣೆ ಮಾಡಲಾಗುತ್ತದೆ. ಈ ದಿನಕ್ಕೆ ಅರ್ಥ ಪೂರ್ಣವೆಂಬಂತೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಹಿಳೆಯರು ಸಾಧನೆಯ ಮೈಲಿಗಲ್ಲಾಗಿದ್ದಾರೆ.

ಕಳೆದ ಮೂರು ದಶಕಗಳ ಹಿಂದೆ ಮಹಿಳೆಯರು ಕೇವಲ ಮನೆಗೆ ಮಾತ್ರ ಸೀಮಿತವಾಗಿರಬೇಕು ಎಂಬ ಕಲ್ಪನೆ ಎಲ್ಲರಲ್ಲಿ ಇತ್ತು. ಬಳಿಕ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ನಾವು ಪುರುಷರಿಗೇನು ಕಮ್ಮಿ ಇಲ್ಲ, ನಮ್ಮಲ್ಲೂ ಸಾಧನೆ ಮಾಡುವ ಆತ್ಮಸ್ಥೈರ್ಯವಿದೆ ಎಂದು ತೊರಿಸಿಕೊಡುವ ಮೂಲಕ ನಮ್ಮಿದಂಲೂ ದೇಶ ಕಟ್ಟಲು ಸಾಧ್ಯ ಎಂದು ಹೇಳಿದ್ದಾರೆ. ನಾಳೆ ವಿಶ್ವ ಮಹಿಳಾ ದಿನಾಚರಣೆ ಇದೆ. ಇದಕ್ಕೆ ಅರ್ಥ ಕಲ್ಪಿಸುವಂತೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಮಹಿಳೆಯರೇ ಬಹುತೇಕ ಲೀಡ್ ಮಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದು, ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಕಾರ್ಯನಿರ್ವಹಿಸುತ್ತಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಮಹಿಳೆಯರ ಪರ್ವ ಆರಂಭವಾಗಿದೆ. ಜಿಲ್ಲಾಧಿಕಾರಿ ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಎಡಿಸಿ ಶೈಲಜಾ, ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ, ಭೂ ಮತ್ತು ಗಣಿ ಇಲಾಖೆ ಪುಷ್ಪ, ಜಿ.ಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ ಸೇರಿದಂತೆ ಬಹುತೇಕ ಇಲಾಖೆಗಲ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಮಹಿಳೆಯರೆ ಹೆಚ್ಚಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಅತೀ ಹೆಚ್ಚು ಮಹಿಳೆಯರು ಇರುವುದು ಇದೇ ಮೊದಲ ಬಾರಿಗೆ ಎನ್ನಲಾಆಗುತ್ತಿದ್ದು, ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಇದು ಒಳ್ಳೆಯ ಸಮಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಸದ್ಯ ಲೀಡ್ ಮಾಡುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಈ ವರ್ಷದ ಮಹಿಳಾ ದಿನಾಚರಣೆಗೆ ಜಿಲ್ಲೆಯ ಮಹಿಳೆಯರಿಗೆ ಇದೊಂದು ಗಿಫ್ಟ್ ಎಂಬಂತೆ ಆಗಿದೆ. ಈ ಮಹಿಳೆಯರ ಸಾಧನೆ ಎಲ್ಲಾ ಮಹಿಳೆಯರಿಗೆ ಸ್ಫೂರ್ತಿಯಾಗಿ ಸಾಧನೆಯ ಶಿಖರವನ್ನೇರಬೇಕು ಎನ್ನೋದೇ ನಮ್ಮ ಆಶಯವಾಗಿದೆ.

Comments

Leave a Reply

Your email address will not be published. Required fields are marked *