ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದ್ದು, ನಿನ್ನೆಯಿಂದ ತೀರಾ ಹದಗೆಟ್ಟಿದ್ದು, ಕೋಮಾದಲ್ಲಿದ್ದಾರೆ ಎಂದು ಸೇನಾ ಆಸ್ಪತ್ರೆ ತಿಳಿಸಿದೆ.
ಪ್ರಣಬ್ ಅವರ ಆರೋಗ್ಯದ ಸ್ಥಿತಿಗತಿ ಕುರಿತು ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಆರ್ಮಿ ಆಸ್ಪತ್ರೆ, ಪ್ರಣಬ್ ಮುಖರ್ಜಿ ಅವರು ಆಸ್ಪತ್ರೆಗೆ ದಾಖಲಾಗಿ 20 ದಿನಗಳಾಗಿದ್ದು, ಕೋಮಾ ಹಂತವನ್ನು ತಲುಪಿದ್ದಾರೆ. ಶ್ವಾಸಕೋಸದ ಸೋಂಕಿ(ಲಂಗ್ ಇನ್ಫೆಕ್ಷನ್)ನಿಂದಾಗಿ ಅವರು ಸೆಪ್ಟಿಕ್ ಶಾಕ್‍ಗೆ ಒಳಗಾಗಿದ್ದಾರೆ. ಹೀಗಾಗಿ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ನಿನ್ನೆಯಿಂದ ಪ್ರಣಬ್ ಆರೋಗ್ಯದಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ತಜ್ಞ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಅವರು ಕೋಮಾದಲ್ಲಿದ್ದು, ವೆಂಟಿಲೇಟರ್‍ನಲ್ಲಿರಿಸಲಾಗಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
84 ವರ್ಷದ ಪ್ರಣಬ್ ಮುಖರ್ಜಿ, ಆಗಸ್ಟ್ 10ರಂದು ದೆಹಲಿ ಕಂಟೋನ್ಮೆಂಟ್‍ನ ಆರ್ಮಿ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೆದುಳು ಹೆಪ್ಪುಗಟ್ಟುವಿಕೆಯನ್ನು ತಡೆಯಲಾಗಿದ್ದು, ತಜ್ಞ ವೈದ್ಯರು ಅವರ ಆರೋಗ್ಯದ ಕುರಿತು ನಿಗಾ ವಹಿಸಿದ್ದಾರೆ.

ಪ್ರಣಬ್ ಮುಖರ್ಜಿ ಅವರು ಆಸ್ಪತ್ರೆಗೆ ದಾಖಲಾದಾಗ ಕೊರೊನಾ ಸೋಂಕು ತಗುಲಿರುವುದು ಸಹ ಪತ್ತೆಯಾಗಿತ್ತು. ನಂತರ ಶ್ವಾಸಕೋಶದಲ್ಲಿ ಸೋಂಕು ಹಾಗೂ ಕಿಡ್ನಿ ನಿಷ್ಕ್ರಿಯತೆಯಿಂದ ಬಳಲುತ್ತಿದ್ದಾರೆ.

Leave a Reply