ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮೈಸೂರು: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲಿತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಅವರು ಇಂದು ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ ಚಿಕಿತ್ಸೆಗೆ ಅವರು ಚೆನ್ನೈಗೂ ಸಹ ತೆರಳಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಕೃಷ್ಣ ಅವರನ್ನು ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು. ಇದೀಗ ಅವರು ನಿಧನರಾಗಿದ್ದು,  ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು. ಮೂರು ಬಾರಿ ಕೆ.ಆರ್.ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು, 1996 ರಲ್ಲಿ ಮಂಡ್ಯದ ಸಂಸದರು ಸಹ ಆಗಿದ್ದರು. 1988ರಲ್ಲಿ ಎಸ್.ಆರ್.ಬೊಮ್ಮಾಯಿ ಅವರ ಸಂಪಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಹಾಗೂ 2006 ರಿಂದ 2008ರ ವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

Comments

Leave a Reply

Your email address will not be published. Required fields are marked *