ಮಾಸ್ಕ್ ಹಾಕಿಲ್ಲ ಅಂದ್ರೆ ದಂಡ ಫಿಕ್ಸ್-ರೈಲ್ವೆ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ನವದೆಹಲಿ: ರೈಲ್ವೆ ನಿಲ್ದಾಣದಲ್ಲಿ, ರೈಲಿನಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ ರೈಲ್ವೆ ಸಚಿವಾಲಯ 500 ರೂಪಾಯಿ ದಂಡವನ್ನು ವಿಧಿಸುವುದಾಗಿ ಹೇಳಿದೆ.

ದೇಶದ್ಯಂತ ಕೊರೊನಾ ಹೆಚ್ಚಾಗುತ್ತಿದೆ. ಈ ಹಿನ್ನೆಯಲ್ಲಿ ಭಾರತೀಯ ರೈಲ್ವೆ ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ರೈಲ್ವೆ ನಿಯಮಗಳು 2012ರ ಕಾಯ್ದೆಯಡಿ 500 ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ ಎಂದು ಪ್ರಯಾಣಿಕರಿಗೆ ಎಚ್ಚರಿಸಿ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. ಮಾಸ್ಕ್ ಧರಿಸದವರಿಗೆ 500 ರೂಪಾಯಿ ದಂಡವನ್ನು ವಿಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಲಿದೆ. ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದೆ.

ಕೊರೊನಾ ಟೆಸ್ಟ್ ನಿಂದ ತಪ್ಪಿಸಿಕೊಳ್ಳಲು ರೈಲ್ವೆ ನಿಲ್ದಾಣದಿಂದ ಪ್ರಯಾಣಿಕರು ಹೊರಗೆ ಓಡಿಹೋದ ಘಟನೆ ಬಿಹಾರದ ಬಕ್ಸಾರ್ ರೈಲ್ವೆ ನಿಲ್ದಾಣದಲ್ಲಿ ಇತ್ತೇಚಿಗೆ ನಡೆದಿತ್ತು. ಆರೋಗ್ಯ ಸಿಬ್ಬಂದಿ ಕೆಲ ಪ್ರಯಾಣಿಕರನ್ನು ತಡೆದು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಹೇಳಿದಾಗ ಹಿಂದೇಟು ಹಾಕಿದ್ದಾರೆ. ಪ್ರಯಾಣಿಕರು ಭಯದಿಂದ ರೈಲ್ವೆ ನಿಲ್ದಾಣದಿಂದ ಹೊರಗೆ ಓಡಿ ಹೋಗಿದ್ದರು.

Comments

Leave a Reply

Your email address will not be published. Required fields are marked *