ಮುಂದಿನ ದಿನಗಳಲ್ಲಿ ಜೆಡಿಎಸ್ ಯುವಕರ ಪಕ್ಷವೂ ಆಗಲಿದೆ: ನಿಖಿಲ್

ಬೆಂಗಳೂರು: ನಟ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿಯೇ ಆಚರಿಸಿದ್ದು, ಬರೋಬ್ಬರಿ 100 ಕೆ.ಜಿ. ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.

ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎಂದರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗಲಿದೆ. ನಾವೆಲ್ಲ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡೊಯೋಣ. ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಗೆ ಇಲ್ಲಿ ಸೇರಿದ್ದೀರಿ. ನೀವೆಲ್ಲ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ, ಎಲ್ಲರಿಗೂ ಧನ್ಯವಾದಗಳು ಎಂದರು.

ಸಾವಿರಾರು ಅಭಿಮಾನಿಗಳು ನಿಖಿಲ್ ಕುಮಾರಸ್ವಾಮಿಯವರಿಂದ 100 ಕೆಜಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಅಭಿಮಾನಿಗಳಿಗೆ ಊಟ ವ್ಯವಸ್ಥೆಯನ್ನು ಸಹ ನಿಖಿಲ್ ಸೈನ್ಯ ಸಮಿತಿ ಮಾಡಿತ್ತು.

Comments

Leave a Reply

Your email address will not be published. Required fields are marked *