ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ

ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.

ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ.

ಮುತ್ತಪ್ಪ ರೈ ಮಗ ರಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರ ಬಿಡದಿಯ ಮನೆಯಲ್ಲಿ ಸಿಸಿಬಿ ಶೋಧ ಕಾರ್ಯ ನಡೆಸುತ್ತಿದೆ. ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್‍ಗೆ ಶಾಕ್ ನೀಡಿದ್ದರು. ಏಕಕಾಲದಲ್ಲಿ 14 ಕಡೆ ಸುಮಾರು 60ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ 57 ಲಕ್ಷ ಹಣ ಹಾಗೂ ಕೆಲವೊಂದು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಡಿಕೆ ಬ್ರದರ್ಸ್ ಬೆಂಗಳೂರು ಮನೆ ಜೊತೆಗೆ ಕನಕಪುರದ ಸ್ವಗ್ರಾಮ ದೊಡ್ಡ ಆಲಹಳ್ಳಿಯ ಮನೆ, ರಾಮನಗರದ ಕೋಡಿಹಳ್ಳಿಯಲ್ಲಿರೋ ತಾಯಿ ಗೌರಮ್ಮ ಮನೆಯಲ್ಲೂ ಸಿಬಿಐ ಶೋಧ ಮಾಡಿತ್ತು.

Comments

Leave a Reply

Your email address will not be published. Required fields are marked *