ಮೂರನೇ ಅಲೆ ತಡೆಯಲು ಉಡುಪಿಗೆ 45 ಪೀಡಿಯಾಟ್ರಿಕ್ ವೆಂಟಿಲೇಟರ್

ಉಡುಪಿ: ಮಹಾಮಾರಿ ಕೊರೊನಾದ ಎರಡನೇ ಅಲೆ ಅಬ್ಬರ ಕಡಿಮೆಯಾಗಿದ್ದು ಶೀಘ್ರ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಆಧುನಿಕ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಲು ಮುಂದಾಗಿದೆ.

ಈಗಾಗಲೇ ಖರೀದಿಸಿರುವ ವೆಂಟಿಲೇಟರ್ ಗಳನ್ನು ಮಕ್ಕಳಿಗೆ ಬಳಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ 25 ಪೀಡಿಯಾಟ್ರಿಕ್ ಐಸಿಯು ಖರೀದಿಸಲು ಉಡುಪಿ ಜಿಲ್ಲಾಡಳಿತ ಮುಂದಾಗಿದೆ. ಕುಂದಾಪುರ ಮತ್ತು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಮುಂದಿನ ಒಂದೂವರೆ ತಿಂಗಳಿನಲ್ಲಿ ಇಪ್ಪತ್ತು ವೆಂಟಿಲೇಟರ್ ಆಗಮಿಸಲಿದೆ. ಮೊದಲ ಹಂತದಲ್ಲಿ ಜಿಲ್ಲೆಗೆ 45 ಪೀಡಿಯಾಟ್ರಿಕ್ ವೆಂಟಿಲೇಟರ್ ಖರೀದಿಸಲಾಗುವುದು.

ಕೊರೊನಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಉಡುಪಿ ಜಿಲ್ಲೆಯಾದ್ಯಂತ ಸಾಕಷ್ಟು ಐಸಿಯು ಬೆಡ್ ಗಳು ಇವೆ. ಹಿರಿಯರಿಗೆ, ವಯಸ್ಕರಿಗೆ ಬೇಕಾದ ಎಲ್ಲಾ ವೈದ್ಯಕೀಯ ಸಲಕರಣೆಗಳು ಜಿಲ್ಲೆಯಲ್ಲಿ ಖರೀದಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಖಾಸಗಿ ಆಸ್ಪತ್ರೆಗಳು ಇರುವುದರಿಂದ ಚಿಕಿತ್ಸೆಗೆ ಒಂದನೇ ಮತ್ತು ಎರಡನೇ ಅಲೆಯಲ್ಲಿ ಸಮಸ್ಯೆಯಾಗಿಲ್ಲ. ಆದರೆ ಮೂರನೆಯ ಅಲೆಯ ಸಂದರ್ಭ ಜಿಲ್ಲೆಗೆ ಕೆಲವು ಸವಾಲುಗಳು ಇವೆ.

ಜಿಲ್ಲೆಯಲ್ಲಿ ಪೀಡಿಯಾಟ್ರಿಕ್ ವೆಂಟಿಲೇಟರ್ ಬಹಳ ಕಡಿಮೆ ಇದೆ. ಆಕ್ಸಿಜನ್ ಮಾಸ್ಕ್ ಗಳನ್ನು ಖರೀದಿ ಮಾಡಬೇಕಾಗಿದೆ. ಮಕ್ಕಳಿಗೆ ಸಂಬಂಧಪಟ್ಟಂತಹ ತಜ್ಞ ವೈದ್ಯರ ನೇಮಕ ಮಾಡಬೇಕಾಗುತ್ತದೆ. ಐಸಿಯು ಮಾನಿಟರ್ ಗಳ ಖರೀದಿ ಆಗಬೇಕಾಗಿದೆ. ಉಡುಪಿ ಜಿಲ್ಲೆಯ ಎನ್ ಜಿಒ, ಕಂಪನಿಗಳು ಮತ್ತು ಸಿಎಸ್‍ಆರ್ ಫಂಡ್ ಗಳಿಂದ ಎಲ್ಲಾ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಯ ಲಸಿಕೆ ಕೊರತೆಯನ್ನು ಒಪ್ಪಿಕೊಂಡ ಸಚಿವ ಸುಧಾಕರ್

ಮುಂದಿನ ಒಂದೂವರೆ ಎರಡು ತಿಂಗಳಲ್ಲಿ ಜಿಲ್ಲಾಸ್ಪತ್ರೆಗೆ ಕುಂದಾಪುರ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆಗಳಲ್ಲಿ ಎಲ್ಲಾ ಸಲಕರಣೆಗಳನ್ನು ಅಳವಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈಗಾಗಲೇ ಮೂರನೇ ಅಲೆಯನ್ನು ಎದುರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನಾಲ್ಕು ಬಾರಿ ತಜ್ಞರು, ಅಧಿಕಾರಿಗಳ ಸಭೆ ನಡೆಸಲಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ 19,500 ಕಾಲೇಜು ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಶನ್

Comments

Leave a Reply

Your email address will not be published. Required fields are marked *