ಮೆಡಿಕಲ್ ಕಾಲೇಜ್ ಪಕ್ಕದಲ್ಲೇ ಗಾಂಜಾ ಮಾರಾಟ- ವಿರಾಜಪೇಟೆಯಲ್ಲಿ ಐವರ ಬಂಧನ

ಮಡಿಕೇರಿ: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಕೊಡಗಿನ ಪೊಲೀಸರು ಅಲರ್ಟ್ ಆಗಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ವಿರಾಜಪೇಟೆ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಮುದಾಸಿರ್ ಅಜಮ್ಮದ್, ಕೊಡಗಿನ ಮಹಮ್ಮದ್ ಫಾರೂಕ್, ರಫೀಕ್, ಮನು ಮತ್ತು ಮಹೇಶ್ ಬಂಧಿತ ಆರೋಪಿಗಳು. ಈ ಐವರು ಬಂಧಿತರಿಂದ ಒಂದು ಲಕ್ಷ ರೂಪಾಯಿ ಮೌಲ್ಯದ 3.361 ಕೆ.ಜಿ ಗಾಂಜಾ ಮತ್ತು ಗಾಂಜಾ ಮಾರಾಟ ಮಾಡಿ ಇಟ್ಟುಕೊಂಡಿದ್ದ 5 ಸಾವಿರ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಿರಾಜಪೇಟೆ ಪಟ್ಟಣದ ದಂತ ವೈದ್ಯಕೀಯ ಕಾಲೇಜಿನ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಐವರು ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಚೇಸ್ ಮಾಡಿ ಐವರ ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕ್ ಗಳ ಮೂಲಕ ಬಿಡಿ ಬಿಡಿಯಾಗಿ ಮಾರುತ್ತಿದ್ದರು ಎನ್ನಲಾಗಿದೆ. ಐವರನ್ನು ಬಂಧಿಸಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Comments

Leave a Reply

Your email address will not be published. Required fields are marked *