ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಬಿಜೆಪಿ ಪಕ್ಷದ ಹಿರಿಯ ಮುಖಂಡ ಎಸ್.ಎಂ ಕೃಷ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ವಿಚಾರವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಸ್ಎಂ ಕೃಷ್ಣ, ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ರಾಜೇಶ್ಗೌಡ ಮತ್ತು ಮುನಿರತ್ನ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪನವರ ಶಿಸ್ತು ಬದ್ಧ ಆಡಳಿತಕ್ಕೆ ಜನರ ಸ್ಪಂದನೆ ನೀಡಿದ್ದಾರೆ ಎಂದಿದ್ದಾರೆ.

ಇಂದು ಶಿರಾ ಮತ್ತು ಆರ್ಆರ್ ನಗರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಿರಾ ಕ್ಷೇತ್ರದಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆದ್ದು ಬೀಗಿ ಇತಿಹಾಸ ಸೃಷ್ಟಿಸಿದ್ದಾರೆ.

Leave a Reply