ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಹೊಸ ಮಂತ್ರಿಗಳು ಸೇರ್ಪಡೆಯಾಗುತ್ತಿದ್ದಂತೆ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

ಇಂದು ಹೊಸದಾಗಿ ಸೇರ್ಪಡೆಯಾದವರ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಎಲ್.ಮುರುಗನ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಲ್.ಮುರುಗನ್ ಅವರಿಗೆ ಶುಭ ಕೋರುವುದರ ಜೊತೆಗೆ ಬಹುತೇಕರು ಅಣ್ಣಾ ಮಲೈ ಪರವಾಗಿ ಟ್ವೀಟ್ ಮಾಡುತ್ತಿದ್ದಾರೆ.

ಎಲ್.ಮುರುಗನ್ ಅವರು ಸಚಿವರಾಗುತ್ತಿದ್ದಾರೆ, ಇವರು ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತೆರವಾಗಲಿದೆ. ಹೀಗಾಗಿ ಅಣ್ಣಮಲೈ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿ ನೇಮಿಸುವಂತೆ ಹೆಚ್ಚು ಜನ ಒತ್ತಾಯಿಸುತ್ತಿದ್ದಾರೆ.
ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಸೋತರು, ಜನಪ್ರಿಯತೆ ಪಡೆದಿದ್ದಾರೆ. ಪಕ್ಷವನ್ನು ಮುನ್ನಡೆಸುವ ನಾಯಕತ್ವ ಗುಣ ಅವರಲ್ಲಿದೆ. ಹೀಗಾಗಿ ತಮಿಳುನಾಡು ಅಧ್ಯಕ್ಷ ಸ್ಥಾನವನ್ನು ಅಣ್ಣಾಮಲೈ ಅವರಿಗೆ ನೀಡಬೇಕು ಎಂದು ಬಿಜೆಪಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಎಲ್.ಮುರುಗನ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಮಿಳುನಾಡು ಬಿಜೆಪಿಯ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಅವರೇ ಸೂಕ್ತ ವ್ಯಕ್ತಿ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಬಿ.ಎಲ್.ಸಂತೋಷ್ ಅವರೊಂದಿಗೆ ಅಣ್ಣಾಮಲೈ ಅವರು ಇರುವ ಫೋಟೋ ಹಂಚಿಕೊಂಡು ಯಂಗ್‍ಸ್ಟರ್ಸ್ ವೇಟಿಂಗ್ ಫಾರ್ ಗುಡ್ ನ್ಯೂಸ್ ಎಂದು ಟ್ವೀಟ್ ಮಾಡುತ್ತಿದ್ದಾರೆ.

Leave a Reply