ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸ್ಬೇಕು: ಸಿದ್ದರಾಮಯ್ಯ

– 6 ಸಚಿವರು ರಾಜೀನಾಮೆ ಕೊಡಬೇಕು

ಬೆಂಗಳೂರು: ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಈಗಾಗಲೇ ಕೋರ್ಟಿಗೆ ಹೋಗಿರುವ 6 ಮಂದಿ ಸಚಿವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

6 ಸಚಿವರು ರಾಜೀನಾಮೆ ಕೊಡಬೇಕು. ಹಾಗೆಯೇ ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಹೋರಾಟ ಮುಂದುವರಿಸುತ್ತೇವೆ. ಸರ್ಕಾರ ಪ್ರಕರಣ ನಿಭಾಯಿಸಲು ವಿಫಲವಾಗಿದೆ. ತಾರತಮ್ಯ ಧೋರಣೆ ಸರಿಯಲ್ಲ ಎಂಸು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಜಿ ಸಚಿವರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆಯೇ 6 ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ಹೋಗಿದ್ದರು. ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಆದರೆ ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

Comments

Leave a Reply

Your email address will not be published. Required fields are marked *