ಬೆಂಗಳೂರು: ಇಂದು ಕರ್ನಾಟಕದಲ್ಲಿ 584 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 676 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಕೇವಲ 4 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,31,252 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,10,377 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,694 ಸಕ್ರಿಯ ಪ್ರಕರಣಗಳಿವೆ.

ಒಟ್ಟು ಇಲ್ಲಿಯವರೆಗೆ 12162 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 181 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 10716 ಆಂಟಿಜನ್ ಟೆಸ್ಟ್, 84,300 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 85,016 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 282, ಬೆಳಗಾವಿ 35, ದಕ್ಷಿಣ ಕನ್ನಡ 20, ಮೈಸೂರು 36 ಹಾಗೂ ತುಮಕೂರಿನಲ್ಲಿ 35 ಮಂದಿಯಲ್ಲಿ ಇಂದು ಸೋಂಕು ಕಾಣಿಸಿಕೊಂಡಿದೆ.
ಐಸಿಯುನಲ್ಲಿ ಒಟ್ಟು 181 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿ 77, ಕಲಬುರಗಿ 15 ಹಾಗೂ ಉಡುಪಿಯಲ್ಲಿ 6 ಮಂದಿ ಐಸಿಯುನಲ್ಲಿದ್ದಾರೆ.
ಇಂದಿನ 16/01/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bflkXLrIAm pic.twitter.com/V0f2EPDMFB
— Karnataka Health Department (@DHFWKA) January 16, 2021

Leave a Reply