ರಾಜ್ಯದಲ್ಲಿ ಕೊರೊನಾ ಕಾಣಿಸಿಕೊಳ್ಳದ ಏಕಮಾತ್ರ ಜಿಲ್ಲೆ ಚಾಮರಾಜನಗರ

ಚಾಮರಾಜನಗರ: ಕೊರೊನಾ ಸೋಂಕು ಇರುವ ತಮಿಳುನಾಡು, ಕೇರಳ ಹಾಗೂ ರಾಜ್ಯದ ಮೈಸೂರು, ಮಂಡ್ಯ ಜಿಲ್ಲೆಯ ಗಡಿಗಳನ್ನು ಹೊಂದಿಕೊಂಡಿರುವ ಗಡಿ ಜಿಲ್ಲೆಯಾದರೂ ಕಳೆದ 60 ದಿನಗಳಿಂದ ಒಂದೂ ಪ್ರಕರಣ ದಾಖಲಾಗದೇ ಚಾಮರಾಜನಗರ ಹಸಿರು ವಲಯದಲ್ಲೇ ಮುಂದುವರೆದು ಅಚ್ಚರಿ ಮೂಡಿಸಿದೆ.

ಇದೀಗ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೊರೊನಾ ವ್ಯಾಪಿಸಿದ್ದು, ಕೊರೊನಾ ಕಾಣಿಸಿಕೊಳ್ಳದ ಏಕಮಾತ್ರ ಜಿಲ್ಲೆಯಾಗಿ ಗಡಿಜಿಲ್ಲೆ ಚಾಮರಾಜನಗರ ಉಳಿದುಕೊಂಡಿದೆ. ಕೊರೊನಾ ಸೋಂಕು ಹೆಚ್ಚಿರುವ ತಮಿಳುನಾಡು, ಕೇರಳ ಮತ್ತು ರಾಜ್ಯದ ಮೈಸೂರು, ಮಂಡ್ಯ ಜಿಲ್ಲೆಯ ಗಡಿಗಳನ್ನು ಹೊಂದಿಕೊಂಡಿರುವ ಗಡಿ ಜಿಲ್ಲೆಯಾದರೂ ಕಳೆದ 60 ದಿನಗಳಲ್ಲಿ ಒಂದೂ ಪ್ರಕರಣ ದಾಖಲಾಗದೆ ಹಸಿರು ವಲಯದಲ್ಲೇ ಮುಂದುವರಿದಿದೆ.

ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ, ಅಧಿಕಾರಿ ವರ್ಗದ ಶ್ರಮ, ಜಿಲ್ಲೆಯ ಜನತೆಯ ಸಹಕಾರ ಹಸಿರು ವಲಯವಾಗಲು ಕಾರಣವಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಿಂದುಳಿದ ಜಿಲ್ಲೆ, ನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಗೆ ತುತ್ತಾಗಿದ್ದ ಗಡಿಜಿಲ್ಲೆ ಕೊರೊನಾ ವಿಚಾರದಲ್ಲಿ ಮಾದರಿ ಜಿಲ್ಲೆಯಾಗಿದೆ. ಇಲ್ಲಿಯವರೆಗೆ ಕೊರೊನಾ ಕಾಣಿಸಿಕೊಳ್ಳದ ಜಿಲ್ಲೆಗಳಾಗಿ ರಾಮನಗರ ಹಾಗೂ ಚಾಮರಾಜನಗರ ಮಾತ್ರ ಇದ್ದವು. ಆದರೆ ರಾಮನಗರಕ್ಕೆ ತಮಿಳುನಾಡಿನಿಂದ ಬಂದಿದ್ದ ಕುಟುಂಬದ ಒಂದು ಮಗುವಿಗೆ ಸೋಂಕು ದೃಢಪಟ್ಟಿದ್ದರಿಂದ ಕೊರೊನಾ ಕಾಣಿಸಿಕೊಳ್ಳದ ಏಕಮಾತ್ರ ಜಿಲ್ಲೆಯಾಗಿ ಚಾಮರಾಜನಗರ ಉಳಿದುಕೊಂಡಿದೆ.

Comments

Leave a Reply

Your email address will not be published. Required fields are marked *