ರಾಜ್ಯದಲ್ಲಿ ಜೂನ್ 30ರ ವರೆಗೆ ಕಠಿಣ ಕ್ರಮ ಸಿಎಂ ಸಭೆಯ ಬಳಿಕ ನಿರ್ಧಾರ: ಬೊಮ್ಮಾಯಿ

– ಜೂನ್ 7 ಬಳಿಕ ಲಾಕ್‍ಡೌನ್ ಮುಂದುವರಿಕೆ ಸುಳಿವು

ಬೆಂಗಳೂರು: ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಕಠಿಣ ಕ್ರಮದ ಬಗ್ಗೆ ಸಿಎಂ ಸಭೆಯ ಬಳಿಕ ನಿರ್ಧಾರ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಕೊರೊನಾ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಹೀಗಾಗಿ ಇದರ ಬಗ್ಗೆ ರಾಜ್ಯದಲ್ಲಿ ಅನುಷ್ಠಾನ ಮಾಡುವ ಸಂಬಂಧ ಸಭೆ ನಡೆಸಿ ತೀರ್ಮಾನ ಮಾಡಲು ನಿರ್ಧಾರ ಮಾಡಲಾಗಿದೆ. ಎಲ್ಲ ಸಚಿವರ ಜೊತೆ ಸಿಎಂ ಸಭೆ ನಡೆಸಲು ತೀರ್ಮಾನ ಮಾಡಿದ್ದಾರೆ. ಶೀಘ್ರವೇ ಸಚಿವರ ಜೊತೆ ಸಭೆ ನಡೆಯಲಿದೆ. ಆದರೆ ಜೂನ್ 7ರ ವರೆಗೆ ಇರುವ ಲಾಕ್‍ಡೌನ್ ನಲ್ಲಿ ಯಾವುದೇ ಬದಲಾವಣೆ ಮಾಡೋದಿಲ್ಲ ಎಂದು ಅನ್‍ಲಾಕ್ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ಜಿಎಸ್ಟಿ ಕೌನ್ಸಿಲ್ ಸಭೆ ನಡೆದಿದೆ. ಸಭೆಯಲ್ಲಿ ಕರ್ನಾಟಕದ ಜಿಎಸ್ಟಿ ಪಾಲು ಕೊಡುವಂತೆ ಒತ್ತಾಯ ಮಾಡಲಾಗಿದೆ. 11,000 ಕೋಟಿ ಕೊಡುವಂತೆ ಒತ್ತಡ ಹೇರಲಾಗಿದೆ. ಅದನ್ನು ಕೇಂದ್ರ ಸರ್ಕಾರ ಶೀಘ್ರವೇ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಅದಲ್ಲದೆ ಲಾಕ್‍ಡೌನ್ ಸಂಕಷ್ಟದಲ್ಲಿ ಉಂಟಾಗಿರುವ ಆರ್ಥಿಕ ನಷ್ಟ ಪರಿಹಾರ ನೀಡುವಂತೆಯೂ ಮನವಿ ಮಾಡಲಾಗಿದೆ. ಕಳೆದ ಬಾರಿಯ ಲಾಕ್‍ಡೌನ್ ನಲ್ಲೂ ಕೂಡ ಸಾಕಷ್ಟು ನಷ್ಟ ಉಂಟಾಗಿತ್ತು. ಈ ಬಾರಿಯ ಲಾಕ್‍ಡೌನ್ ನಿಂದ ಸಾಕಷ್ಟು ನಷ್ಟ ಆಗುವ ಸಾಧ್ಯತೆ ಇದೆ. ಈ ಬಗ್ಗೆ ತಜ್ಞರ ಸಮಿತಿ ವರದಿ ಪಡೆದು, ಮುಂದಿನ ಸಭೆಯಲ್ಲಿ ಪರಿಹಾರ ಪ್ರಮಾಣ ನಿಗದಿ ಮಾಡಲಿದ್ದೇವೆ. ಸಂಕಷ್ಟದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವಿನ ನಿರೀಕ್ಷೆಯಲ್ಲಿದ್ದೇವೆ. ಮತ್ತೊಮ್ಮೆ ರಾಜ್ಯಕ್ಕೆ ಅಗತ್ಯ ವಿರುವ ಪರಿಹಾರ ಗಳ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿ ಒತ್ತಾಯ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡರು.

ಈವಾಗ ಪಾಸಿಟಿವ್ ದರ ಶೇಕಡ 10ಕ್ಕಿಂತ ಹೆಚ್ಚಿದೆ. 10 ಕ್ಕಿಂತ ಕಡಿಮೆ ಬರುವ ತನಕ ತನಕ ಲಾಕ್‍ಡೌನ್ ನಲ್ಲಿ ಸಡಿಲಿಕೆ ಇಲ್ಲ. ಈವಾಗಿರುವ ಕಠಿಣ ನಿಯಮಗಳೇ ಮುಂದುವರಿಯಲಿದೆ. ನಮಗೆ ಇರುವ ಗುರಿ ಸೋಂಕಿತರ ಪ್ರಮಾಣ ಕಡಿಮೆ ಮಾಡುವುದು ಎಂದರು. ಇದನ್ನೂ ಓದಿ. ವಿಕೃತಿ ಮೆರೆದ ಮರುದಿನವೇ ಪೊಲೀಸ್ ಠಾಣೆಗೆ ಹೋಗಿತ್ತು ಗ್ಯಾಂಗ್ ರೇಪ್ ಗ್ಯಾಂಗ್

ಇದೇ ವೇಳೆ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಒಂದೆರೆಡು ದಿನಗಳಲ್ಲಿ ಪ್ರಕರಣದ ಹಿನ್ನೆಲೆ ಸ್ಪಷ್ಟ ಚಿತ್ರಣ ದೊರಕಲಿದೆ. ನಂತರ ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *