ರಾಜ್ಯದಲ್ಲೂ ಸಚಿವ ಸಂಪುಟ ಪುನಾರಚನೆಗೆ ಮುಂದಾಗುತ್ತಾ ಬಿಜೆಪಿ ಹೈಕಮಾಂಡ್?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗದ್ದಲದ ನಡುವೆಯೇ ಸಂಪುಟ ಪುನಾರಚನೆ ಬಿಜೆಪಿ ಹೈಕಮಾಂಡ್ ಮುಂದಾಗುತ್ತಾ ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿವೆ.

ಬಿಜೆಪಿಯ ರೆಬೆಲ್ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಹೆಚ್.ವಿಶ್ವನಾಥ್ ಮತ್ತು ಸಿ.ಪಿ.ಯೋಗೇಶ್ವರ್ ಪರೋಕ್ಷವಾಗಿ ನಾಯಕತ್ವ ಬದಲಾವಣೆಯ ಮಾತುಗಳನ್ನಾಡುತ್ತಿದ್ದಾರೆ. ಒಂದು ವೇಳೆ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡದಿದ್ರೆ ಸಂಪುಟ ಪುನಾರಚನೆಗೆ ಮುಂದಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಆಗಸ್ಟ್ ನಲ್ಲಿ ಸಂಪುಟ ಪುನಾರಚೆನೆ ಮೂಲಕ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳುವ ತಂತ್ರಕ್ಕೆ ಕಮಲ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸುಮಾರು 12ಕ್ಕೂ ಹೆಚ್ಚು ನಾಯಕರಿಗೆ ಕೊಕ್ ಕೊಟ್ಟು, ಪಕ್ಷ ನಿಷ್ಠರು ಮತ್ತು ರೆಬೆಲ್ ಗಳು, ವಲಸಿಗರನ್ನು ತರುವುದು. ಆ ಮೂಲಕ ಎಲ್ಲರನ್ನೂ ಸಮಧಾನಪಡಿಸಿ ಗೊಂದಲ ಬಗೆಹರಿಸೋದು ಬಿಜೆಪಿ ಪ್ಲಾನ್ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

ಇತ್ತ ಮೈತ್ರಿ ಸರ್ಕಾರ ಪತನಗೊಳಿಸಿ ಕಮಲ ಬಾವುಟ ಹಿಡಿದ ಹಲವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಸಚಿವ ಎಂಟಿಬಿ ನಾಗರಾಜ್ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ರೆ, ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಸಹ ಸಂಪುಟ ಸೇರುವ ಪ್ರಯತ್ನಕ್ಕೆ ಮುಂದಾದಂತೆ ಕಾಣಿಸುತ್ತಿದೆ. ಆರ್.ಆರ್.ನಗರ ಶಾಸಕ ಮುನಿರತ್ನ ಶೀಘ್ರದಲ್ಲೇ ಸಚಿವರಾಗ್ತಾರೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

Comments

Leave a Reply

Your email address will not be published. Required fields are marked *