ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷ ಡಾ. ಯೂಸುಫ್‌ ನಿಧನ

ಬೆಂಗಳೂರು: ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಯೂಸುಫ್‌ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಳಗ್ಗೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ನಿಧನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷರು, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್ ರವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶ್ರೀ ಮಹಮ್ಮದ್ ಯೂಸುಫ್ ಅವರ ನಿಧನದ ಸುದ್ದಿ ದುಃಖಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧು ಬಳಗದ ವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *