ರಾಜ್ ಘಾಟ್‍ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ಮಹಾತ್ಮಾ ಗಾಂಧಿ ಪುಣ್ಯ ತಿಥಿಯನ್ನು ಹುತಾತ್ಮ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಸಹ ರಾಜ್ ಘಾಟ್‍ಗೆ ತೆರಳಿ ಹುತಾತ್ಮ ದಿನವನ್ನು ಆಚರಿಸಿದ್ದು, ಮಹಾತ್ಮಾ ಗಾಂಧಿಯವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ರಾಜ್‍ಘಾಟ್‍ಗೆ ತರಳಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿ ಎರಡು ನಿಮಿಷಗಳ ಮೌನಾಚರಣೆ ಆಚರಿಸಿದ್ದಾರೆ. ಅಲ್ಲದೆ ದೇಶವಾಸಿಗಳಿಗೂ ಆಚರಿಸುವಂತೆ ಕರೆ ನೀಡಿದ್ದಾರೆ. ಈ ವೇಳೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಸಾಥ್ ನೀಡಿದ್ದಾರೆ. ಮೌನಾಚರಣೆ ಬಳಿಕ ಸರ್ವಧರ್ಮ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಮಹಾತ್ಮ ಗಾಂಧಿಯವರನ್ನು ಜನವರಿ 30, 1948ರಂದು ರಾಥುರಾಮ್ ಗೋಡ್ಸೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರ ಮರಣ ದಿನವನ್ನು ಹುತಾತ್ಮ ದಿನವೆಂದು ಆಚರಿಸಲಾಗುತ್ತದೆ.

ಈ ಕುರಿತು ಟ್ವೀಟ್ ಸಹ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಪುಣ್ಯ ತಿಥಿಯಂದು ಶ್ರೇಷ್ಠ ಬಾಪು ಅವರಿಗೆ ಗೌರವ ನಮನಗಳು. ಅವರ ಆದರ್ಶಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಲೇ ಇರುತ್ತವೆ. ಹುತಾತ್ಮರ ದಿನದಂದು ಭಾರತದ ಭಾರತದ ಸ್ವಾತಂತ್ರ್ಯ ಹಾಗೂ ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಹಾಗೂ ಪುರುಷರ ವೀರರ ತ್ಯಾಗವನ್ನು ನಾವು ಸದಾ ನೆನಪಿಸಿಕೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *