ರಾಯಚೂರಿನಲ್ಲಿ ಭಾರೀ ಮಳೆ- ಕುರಿಗಳನ್ನ ಸೇತುವೆ ದಾಟಿಸಲು ಗ್ರಾಮಸ್ಥರು ಹರಸಾಹಸ

ರಾಯಚೂರು: ಲಿಂಗಸೂಗುರು ತಾಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಬನ್ನಿಗೋಳ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ನೀರು ನುಗ್ಗುವ ಭೀತಿ ಎದುರಾಗಿದೆ.

ಗ್ರಾಮದ ಹಳ್ಳದ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಇದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಕುರಿಗಾಯಿಗಳು ಕಷ್ಟಪಟ್ಟು ತಮ್ಮ ಕುರಿ, ಮೇಕೆಗಳನ್ನ ಹಳ್ಳ ದಾಟಿಸಿದ್ದಾರೆ.

ನಿರಂತರವಾಗಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಗಾಲದಲ್ಲಿ ಈ ಭಾಗದ ಬಹುತೇಕ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗುತ್ತದೆ. ಈ ಭಾರೀ ಉತ್ತಮ ಮಳೆ ಸುರಿಯುತ್ತಿರುವುದರಿಂದ ಹಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಗ್ರಾಮಸ್ಥರು ಪ್ರಾಣಭಯದಿಂದ ಹಳ್ಳ ದಾಟುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳಿದಂತೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

Comments

Leave a Reply

Your email address will not be published. Required fields are marked *