ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಸಿಡಿಪಿ ತಯಾರಿ- ಚಂದನವನದ ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಚಂದನವನದಲ್ಲಿ ತಮ್ಮದೇಯಾದ ವಿಭಿನ್ನ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿರುವ ನಿರ್ದೇಶಕ, ನಟ, ನಿರ್ಮಾಪಕ ರಿಷಬ್ ಶೆಟ್ಟಿ 37ನೇ ವಸಂತಕ್ಕೆ ಕಾಲಿಡುತ್ತಿದ್ದು, ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುತ್ತಿದ್ದಾರೆ.

ಕೊರೊನಾ ಹೊತ್ತಲ್ಲಿ ಇದೇನಪ್ಪ ಭರ್ಜರಿ ಅಂತೀರಾ, ಹೌದು ನೇರವಾಗಿ ಆಚರಿಸದಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ಅವರ ಅಭಿಮಾನಿಗಳು ಸದ್ದು ಮಾಡುತ್ತಿದ್ದು, ಜುಲೈ 7ರಂದು ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೆ ಕಾಮನ್ ಡಿಪಿ ಮೂಲಕ ತಮ್ಮ ನೆಚ್ಚಿನ ನಟನಿಗೆ ಸರ್ಪ್ರೈಸ್ ನೀಡಿದ್ದು, ನಿರ್ದೇಶಕ ಕೃಷ್ಣ ಎರಡು ದಿನ ಮೊದಲೇ ಈ ಕಾಮನ್ ಡಿಪಿಯನ್ನು ಬಿಡುಗಡೆಗೊಳಿಸುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ.

ಸಿಡಿಪಿ ಚಿತ್ರವನ್ನು ಟ್ವೀಟ್ ಮಾಡಿ ಸಾಲುಗಳನ್ನು ಬರೆದಿರುವ ನಿರ್ದೇಶಕ ಕೃಷ್ಣ, ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಬಿಡುಗಡೆ ಮಾಡುತ್ತಿರುವುದಕ್ಕೆ ಸಂತಸವಾಗಿದೆ. ಅಡ್ವಾನ್ಸ್ ಹ್ಯಾಪಿ ಬರ್ತ್‍ಡೇ ಟು ಆಕ್ಟರ್, ಡೈರೆಕ್ಟರ್, ಪ್ರೊಡ್ಯೂಸರ್ ಎಂದು ಬರೆದಿದ್ದಾರೆ. ರಿಷಬ್ ಶೆಟ್ಟಿ ಹುಟ್ಟುಹಬ್ಬದ ಕಾಮನ್ ಡಿಪಿ ಇದೀಗ ಸಾಮಾಜಿಕ ಜಾಲತಾಣಗಳ್ಲಿ ಸಖತ್ ವೈರಲ್ ಆಗಿದೆ. ಕೇವಲ ರಿಷಬ್ ಶೆಟ್ಟಿ ಫ್ಯಾನ್ಸ್ ಮಾತ್ರವಲ್ಲ, ದರ್ಶನ್, ಯಶ್, ಸುದೀಪ್, ಉಪೇಂದ್ರ, ರಶ್ಮಿಕಾ ಮಂದಣ್ಣ ಫ್ಯಾನ್ಸ್ ಸಹ ಸಿಡಿಪಿ ಪೋಸ್ಟ್ ಮಾಡಿ ಶುಭ ಕೋರಿದ್ದಾರೆ.

ಅಲ್ಲದೆ ಚಂದನವನದ ತಾರಾಗಣವೇ ರಿಷಬ್ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದು, ನಟ ಜಗ್ಗೇಶ್ ಟ್ವೀಟ್ ಮಾಡಿ ಹಾರೈಸಿದ್ದಾರೆ. ನಲ್ಮೆಯ ಯುವ ಮಿತ್ರ ರಿಷಬ್ ಹುಟ್ಟುಹಬ್ಬದ ಶುಭಾಶಯಗಳು, ಗಾಡ್ ಬ್ಲೆಸ್ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ರಿಷಬ್ ಪ್ರತಿಕ್ರಿಯಿಸಿ, ಥ್ಯಾಂಕ್ಯೂ ಅಣ್ಣಯ್ಯ ಎಂದಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಹವಾ ಕ್ರಿಯೇಟ್ ಮಾಡುವ ಮೂಲಕ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.

ರಿಷಬ್ ಶೆಟ್ಟಿ ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕಾಗಿ ಸಂದೇಶ್ ನಾಗರಾಜ್ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ಮುಹೂರ್ತ ಸಹ ಇತ್ತೀಚೆಗೆ ನೆರವೇರಿದ್ದು, ಇನ್ನೇನು ಚಿತ್ರೀಕರಣ ಆರಂಭವಾಗಬೇಕಿದೆ. ಇದರ ನಡುವೆಯೇ ಚಿತ್ರದ ನಾಯಕಿಯ ಹುಡುಕಾಟದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಿಷಬ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವಿಡಿಯೋ ಕಳುಹಿಸುವಂತೆ ಮನವಿ ಮಾಡಿದ್ದರು.

Comments

Leave a Reply

Your email address will not be published. Required fields are marked *