ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

ಮುಂಬೈ: ಟೀಂ ಇಂಡಿಯಾ ಆಟಗಾರರು ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಧರಿಸುವ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ. ಈ ಜೆರ್ಸಿ ರೆಟ್ರೋ ಶೈಲಿಯಲ್ಲಿದ್ದು, ಆಟಗಾರರು ಒಬ್ಬೊಬ್ಬರೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಾಕ್ಕಾಗಿ ಟೀಂ ಇಂಡಿಯಾ ರೆಟ್ರೋ ಶೈಲಿಯ ಹೊಸ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಇದೀಗ ಈ ರೆಟ್ರೋ ಶೈಲಿಯ ಜೆರ್ಸಿಯನ್ನು ತೊಟ್ಟು ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್‌ಮ್ಯಾನ್ ಎನಿಸಿಕೊಂಡಿರುವ ಚೇತೇಶ್ವರ ಪೂಜಾರ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ನಾನು ಈ ಜೆರ್ಸಿಯನ್ನು ತೊಟ್ಟು ಮೈದಾನಕ್ಕೆ ಇಳಿಯಲು ಕಾತರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ದ್ವಿತೀಯಾರ್ಧದಲ್ಲಿ ಧೋನಿ ಬ್ಯಾಟ್‍ನಿಂದ ರನ್ ಮಳೆ ಸುರಿಯಲಿದೆ: ದೀಪಕ್ ಚಹರ್

 

View this post on Instagram

 

A post shared by Ravindra jadeja (@ravindra.jadeja)

ಕಳೆದ ದಿನ ಭಾರತ ತಂಡದ ಆಲ್‍ರೌಂಡರ್ ಆಟಗಾರ ರವೀಂದ್ರ ಜಡೇಜಾ, ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ತೊಡುವ ರೆಟ್ರೋ ಜಂಪರ್ ಶೈಲಿಯ ಸ್ವೆಟರ್ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಧೋನಿ, ಕೊಹ್ಲಿಯ ಬಗ್ಗೆ ಒಂದೇ ಪದದಲ್ಲಿ ಉತ್ತರಿಸಿದ ಸೂರ್ಯಕುಮಾರ್ ಯಾದವ್

ಇದೀಗ ಟೀಂ ಇಂಡಿಯಾ ಆಟಗಾರರು ತೊಟ್ಟಿರುವ ರೆಟ್ರೋ ಶೈಲಿಯ ಜೆರ್ಸಿ ಮತ್ತು ಸ್ವೆಟರ್‍ನಲ್ಲಿ ಯಾವುದೇ ಕಂಪನಿಯ ಲಾಂಛನವನ್ನು ಜೆರ್ಸಿಯ ಮುಂಭಾಗದಲ್ಲಿ ಬಳಸಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಆಯೋಜಿಸುತ್ತಿರುವ ಪಂದ್ಯವಾಗಿರುವುದರಿಂದ ಕೇವಲ ಬಿಸಿಸಿಐ ಹಾಗೂ ಐಸಿಸಿ ಲೋಗೋ ಮಾತ್ರ ಬಳಸಿಕೊಳ್ಳಲಾಗಿದೆ. ಪ್ರಯೋಜಕರಾದ ಬೈಜುಸ್ ಮತ್ತು ಎಂಪಿಎಲ್ ಲೋಗೋ ಸ್ವೆಟರ್ ಮೇಲೆ ಹಾಕಿಲ್ಲ. ಆದರೆ ಜೆರ್ಸಿಯ ಕೈ ತೋಳಿನ ಭಾಗದಲ್ಲಿ ಬೈಜುಸ್‍ನ ಲೋಗೋ ಹಾಕಲಾಗಿದೆ. ಇದನ್ನೂ ಓದಿ: ಸೆಪ್ಟೆಂಬರ್‌ನಿಂದ ನಡೆಯಲಿವೆ ಮುಂದೂಡಲ್ಪಟ್ಟ ಐಪಿಎಲ್ ಪಂದ್ಯಗಳು- ಬಿಸಿಸಿಐ ಘೋಷಣೆ

ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಾಟ ಜೂನ್ 18 ರಿಂದ ಇಂಗ್ಲೆಂಡ್‍ನ ಸೌಥಾಂಪ್ಟನ್‍ನಲ್ಲಿ ನಡೆಯಲಿದೆ.

Comments

Leave a Reply

Your email address will not be published. Required fields are marked *